Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...