Homeಮುಖಪುಟಮಹಾರಾಷ್ಟ್ರದ 18 ಶಾಸಕರು ಸಚಿವರಾಗಿ ಪ್ರಮಾಣ ವಚನ; ಆರಂಭದಲ್ಲೆ ಬಿಜೆಪಿ ಉಪಾಧ್ಯಕ್ಷೆ ಅಪಸ್ವರ

ಮಹಾರಾಷ್ಟ್ರದ 18 ಶಾಸಕರು ಸಚಿವರಾಗಿ ಪ್ರಮಾಣ ವಚನ; ಆರಂಭದಲ್ಲೆ ಬಿಜೆಪಿ ಉಪಾಧ್ಯಕ್ಷೆ ಅಪಸ್ವರ

- Advertisement -
- Advertisement -

ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮತ್ತು ಶಿವಸೇನೆ ಬಣದ ತಲಾ 9 ಶಾಸಕರು ಒಟ್ಟು 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ 40 ದಿನಗಳ ನಂತರ ಶಿಂಧೆ ನೇತೃತ್ವದ ಶಿವಸೇನೆ ಬಣದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದೆ.

ಇಂದು ಬೆಳಗ್ಗೆ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿ ಶಿಂಧೆ ತಮ್ಮ ಪಾಳೆಯದ ಶಾಸಕರನ್ನು ಭೇಟಿ ಮಾಡಿದರು. 55 ಸೇನಾ ಶಾಸಕರ ಪೈಕಿ 40 ಶಾಸಕರು ಅವರನ್ನು ಬೆಂಬಲಿಸಿದ್ದಾರೆ. ಜೂನ್‌ನಲ್ಲಿ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂಪುಟ ವಿಸ್ತರಣೆ ವಿಳಂಬವನ್ನು ಪ್ರತಿಪಕ್ಷಗಳು ಟೀಕಿಸುತ್ತಲೆ ಇದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ಯಾಬಿನೆಟ್‌ ವಿಸ್ತರಣೆಗಾಗಿ ಶಿಂಧೆ ಮತ್ತು ಬಿಜೆಪಿ ನಾಯಕತ್ವದ ನಡುವೆ ಸರಣಿ ಸಭೆಗಳು ನಡೆದಿದ್ದವು. ಮುಖ್ಯಮಂತ್ರಿ ಶಿಂಧೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರರೊಂದಿಗೆ ಸಂಭಾವ್ಯರ ಹೆಸರುಗಳನ್ನು ಚರ್ಚಿಸಲು ಹಲವಾರು ಬಾರಿ ದೆಹಲಿಗೆ ತೆರಳಿದ್ದರು.

ಇದನ್ನೂ ಓದಿ: ‘ಗುಜರಾತಿಗಳನ್ನು ಹೊರ ಕಳುಹಿಸಿದರೆ ಮಹಾರಾಷ್ಟ್ರದಲ್ಲಿ ಹಣವೆ ಇರಲ್ಲ’: ಮಹಾರಾಷ್ಟ್ರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಅಂತಿಮ ಪಟ್ಟಿಯು ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಕ್ಕಾಗಿ ಶಿವಸೇನೆ ಶಾಸಕರಿಗೆ ಬಹುಮಾನ ನೀಡುವುದರ ನಡುವೆ ಉತ್ತಮವಾದ ಸಮತೋಲನವನ್ನು ಬಿಜೆಪಿ ಸಾಧಿಸಿದೆ. ಆದರೆ ಸಚಿವ ಸಂಪುಟದಲ್ಲಿ ಯಾವುದೇ ಮಹಿಳೆಯರಿಗೆ ಸ್ಥಾನವನ್ನು ನೀಡಿಲ್ಲ.

ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗಾವಿತ್, ಅತುಲ್ ಸೇವ್, ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್ ಸೇರಿದಂತೆ ಬಿಜೆಪಿ ಶಾಸಕರು ಸಂಪುಟ ಸ್ಥಾನ ಪಡೆದಿದ್ದಾರೆ.

ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂಟಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗವಿತ್ ಮತ್ತು ಅತುಲ್ ಸೇವ್ ಸೇರಿ ಒಟ್ಟು 8 ಬಿಜೆಪಿ ಶಾಸಕರು ಸಂಪುಟ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…!

ಶಿಂಧೆ ನೇತೃತ್ವದ ಶಿವಸೇನೆಯ ಬಣದಿಂದ ದಾದಾ ಭೂಸೆ, ಸಂದೀಪನ್ ಬುಮ್ರೆ, ಉದಯ್ ಸಮಂತ್, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸರ್ಕರ್, ಗುಲಾಬ್ರಾವ್ ಪಾಟೀಲ್, ಸಂಜಯ್ ರಾಥೋಡ್ ಮತ್ತು ಶಂಭುರಾಜೇ ದೇಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಚಂದ್ರಕಾಂತ್ ಪಾಟೀಲ್ ಅವರು ಮಹಾರಾಷ್ಟ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದು, ಕೊತ್ತೂರು ಶಾಸಕರಾಗಿದ್ದಾರೆ. ಅವರು ಈ ಹಿಂದೆ ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸುಧೀರ್ ಮುಂಗಂತಿವಾರ್ ಅವರು ರಾಜ್ಯದ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ವಿಖೆ ಪಾಟೀಲ್ ಅವರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಏಕನಾಥ್ ಶಿಂಧೆ ಕ್ಯಾಬಿನೆಟ್ ಪ್ರವೇಶಿಸಿದ ದಾದಾ ಭೂಸೆ ಅವರು ಈ ಹಿಂದೆ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಏಕನಾಥ್ ಶಿಂಧೆ ಅವರ ಸಹಾಯಕರಾಗಿದ್ದಾರೆ. ಉದಯ್ ಸಮಂತ್ ರತ್ನಗಿರಿಯ ಶಾಸಕರಾಗಿದ್ದು ಎನ್‌ಸಿಪಿ ನಾಯಕರಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಬಿಜೆಪಿ ಹೈಕಮಾಂಡ್ ನಿರ್ದೇಶನದ ನಂತರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಡಬೇಕಾಗಿದ್ದ ಫಡ್ನವೀಸ್ ಅವರು ಸಂಪುಟದಲ್ಲಿ ಗೃಹ ಖಾತೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ನಡುವೆ ಸಂಜಯ್ ರಾಥೋಡ್ ಅವರನ್ನು ಮಹಾರಾಷ್ಟ್ರ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಅವರು ಟಿಕ್‌ಟಾಕ್ ತಾರೆಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷೆ ಚಿತ್ರಾ ವಾಘ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಹಿಂದಿನ ಸರ್ಕಾರ ಇದ್ದಾಗ ರಾಜ್ಯದ ಈಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೂಡಾ ಅವರ ವಿರುದ್ಧ ಆರೋಪ ಮಾಡಿದ್ದರು.

“ಮಹಾರಾಷ್ಟ್ರದ ಪುತ್ರಿ ಪೂಜಾ ಚವ್ಹಾಣ್ ಸಾವಿಗೆ ಕಾರಣರಾದ ಸಂಜಯ್ ರಾಥೋಡ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ದುರದೃಷ್ಟಕರ… ಅವರ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ’’ ಎಂದು ಚಿತ್ರಾ ವಾಘ್‌ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ರಾಥೋಡ್ ಅವರು ಪ್ರಕರಣದ ಕಾರಣ ರಾಜೀನಾಮೆ ನೀಡಿದ್ದರು. ಆದರೆ ಈಗ ಅವರನ್ನು ಸಂಪುಟದ ಸೇರಿಸಿಕೊಂಡಿದ್ದನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮರ್ಥಿಸಿಕೊಂಡಿದ್ದಾರೆ. “ಹಿಂದಿನ ಸರ್ಕಾರದ ಅವಧಿಯಲ್ಲಿ ತನಿಖೆ ನಡೆಸಿ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಅದಕ್ಕಾಗಿಯೇ ನಾವು ಅವರನ್ನು ಮಂತ್ರಿ ಮಾಡಿದ್ದೇವೆ. ಯಾರೇ ಆಕ್ಷೇಪಿಸಿದರೂ ನಾವು ಮಾತನಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...