Homeಮುಖಪುಟಮಧ್ಯಪ್ರದೇಶದ 19 ಕಾಂಗ್ರೆಸ್‌ ಶಾಸಕರ ರಾಜೀನಾಮೆ: ಬೆಂಗಳೂರಿನಲ್ಲಿ ಬೀಡುಬಿಟ್ಟ ಅತೃಪ್ತರು

ಮಧ್ಯಪ್ರದೇಶದ 19 ಕಾಂಗ್ರೆಸ್‌ ಶಾಸಕರ ರಾಜೀನಾಮೆ: ಬೆಂಗಳೂರಿನಲ್ಲಿ ಬೀಡುಬಿಟ್ಟ ಅತೃಪ್ತರು

- Advertisement -
- Advertisement -

ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಮಧ್ಯಪ್ರದೇಶದ ಆರು ರಾಜ್ಯ ಸಚಿವರು ಸೇರಿದಂತೆ ಅತೃಪ್ತ 19 ಕಾಂಗ್ರೆಸ್ ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ರೆಸಾರ್ಟ್‌‌ನಲ್ಲಿ ಉಳಿದುಕೊಂಡಿರುವ ಅವರು ಒಟ್ಟಿಗೆ ತಮ್ಮ ರಾಜೀನಾಮೆ ಪತ್ರವನ್ನು ಪ್ರದರ್ಶನ ಮಾಡುವ ಫೋಟೊವನ್ನು ಹರಿಯಬಿಟ್ಟಿದ್ದಾರೆ.

ಈ ಕುರಿತು ಲೋಕಸಭೆಯ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಮಾತನಾಡಿ ಹೌದು ಇದು ನಿಜಕ್ಕೂ ನಮ್ಮ ಪಕ್ಷಕ್ಕೆ ನಷ್ಟವಾಗಲಿದೆ ಮತ್ತು ಮಧ್ಯಪ್ರದೇಶದ ನಮ್ಮ ಸರ್ಕಾರ ಬದುಕುಳಿಯುತ್ತದೆ ಎಂದು ನಾನು ಭಾವಿಸುವುದಿಲ್ಲ. ಬಿಜೆಪಿಯ ಇಂದಿನ ರಾಜಕೀಯ ಇದು, ಯಾವಾಗಲೂ ವಿರೋಧಿ ಸರ್ಕಾರಗಳನ್ನು ಉರುಳಿಸಲು ಮತ್ತು ಅಸ್ಥಿರಗೊಳಿಸಲು ಪ್ರಯತ್ನಿಸುತ್ತದೆ ಎಂದು ದೂರಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಐಕ ಶಿವರಾಜ್ ಸಿಂಗ್ ಚೌಹಾಣ್‌ ಮಾತನಾಡಿ “ಕೆಲವು ಕಾಂಗ್ರೆಸ್ ನಾಯಕರಿಗೆ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರು ಮಹಾರಾಜರಾಗಿದ್ದರು, ಈಗ ಅವರು ಬಿಜೆಪಿಗೆ ಬಂದರೆ ಮಾಫಿಯಾ ರೀತಿ ಕಾಣುತ್ತಾರೆ. ಇವು ಅವರ ಎರಡು ಮಾನದಂಡಗಳಾಗಿವೆ ಎಂದು ಟೀಕಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಏನೇ ಆಗಲಿ, ಒಂದು ವಿಷಯ ಸ್ಪಷ್ಟವಾಗಿದೆ. ರಾಹುಲ್ ಗಾಂಧಿ ಮುಂದೆ ನಿಂತು ಪಕ್ಷವನ್ನು ಮುನ್ನಡೆಸುವ ಸಮಯ ಬಂದಿದೆ. ಅವರು ಮತ್ತು ಹಿರಿಯ ನಾಯಕರು ಪಕ್ಷದ ಮೇಲ್ಭಾಗದಲ್ಲಿ ತೀವ್ರ ಬದಲಾವಣೆಗಳನ್ನು ಮಾಡುವ ಸಮಯ ಇದಾಗಿದೆ. ನಾವು ಇನ್ನು ಮುಂದೆ ಈ ರೀತಿ ಮುಂದುವರಿಯಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ಗಾಂಧಿ ಬೇಕು, ಗಾಂಧಿಗೆ ಕಾಂಗ್ರೆಸ್‌ ಬೇಕು ಎಂದು ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...