Homeಅಂತರಾಷ್ಟ್ರೀಯಹಿಂಸಾಚಾರಕ್ಕೆ 19 ಸಾವು: ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ನೇಪಾಳ ಸರ್ಕಾರ

ಹಿಂಸಾಚಾರಕ್ಕೆ 19 ಸಾವು: ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ನೇಪಾಳ ಸರ್ಕಾರ

- Advertisement -
- Advertisement -

ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ಯುವಜನರು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಸೋಮವಾರ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಪ್ರಕ್ಷುಬ್ಧತೆಯು ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರ ಸಮ್ಮಿಶ್ರ ಸರ್ಕಾರದ ಪಾಲುದಾರ ನೇಪಾಳಿ ಕಾಂಗ್ರೆಸ್‌ನ ಗೃಹ ಸಚಿವ ರಮೇಶ್ ಲೇಖಕ್ ಅವರ ರಾಜೀನಾಮೆಗೆ ಕಾರಣವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಪರಿಸ್ಥಿತಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಲೇಖಕ್ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಪಿಟಿಐಗೆ ತಿಳಿಸಿವೆ.

ಹಿಂಸಾಚಾರ ತೀವ್ರಗೊಳ್ಳುತ್ತಿದ್ದಂತೆ, ನೇಪಾಳಿ ಸೈನ್ಯವನ್ನು ಕಠ್ಮಂಡುವಿನಲ್ಲಿ ನಿಯೋಜಿಸಲಾಗಿದೆ. ಸೈನಿಕರು ನ್ಯೂ ಬನೇಶ್ವರ್‌ನಲ್ಲಿರುವ ಸಂಸತ್ ಸಂಕೀರ್ಣದ ಸುತ್ತಲಿನ ರಸ್ತೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿ ತಡವಾಗಿ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿರುವುದಾಗಿ ಸರ್ಕಾರ ಘೋಷಿಸಿದೆ.

ತುರ್ತು ಸಚಿವ ಸಂಪುಟ ಸಭೆಯ ನಂತರ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ನೇಪಾಳ ಸಂವಹನ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪೃಥ್ವಿ ಸುಬ್ಬ ಗುರುಂಗ್ ತಿಳಿಸಿದ್ಧಾರೆ.

‘ಜೆನ್‌ ಝೀ’ಗಳ ಬೇಡಿಕೆಗಳ ಮೇರೆಗೆ ಸಾಮಾಜಿಕ ಮಾಧ್ಯಮ ತಾಣಗಳನ್ನು ಪುನರಾರಂಭಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಾಹಿತಿ ಸಚಿವಾಲಯವು ಸಂಬಂಧಿತ ಸಂಸ್ಥೆಗಳಿಗೆ ಆದೇಶಿಸಿದೆ ಎಂದು ಗುರುಂಗ್ ಹೇಳಿದ್ದಾರೆ.

ನೇಪಾಳ ಪೊಲೀಸ್ ವಕ್ತಾರ ಬಿನೋದ್ ಘಿಮಿರೆ ಮಾತನಾಡಿ, ಪ್ರತಿಭಟನೆಯ ಸಂದರ್ಭದಲ್ಲಿ ಕಠ್ಮಂಡುವಿನ ವಿವಿಧ ಭಾಗಗಳಲ್ಲಿ ನಡೆದ ಘರ್ಷಣೆಯಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು ಪೂರ್ವ ನೇಪಾಳದ ಸುನ್ಸಾರಿ ಜಿಲ್ಲೆಯಲ್ಲಿ ಇಬ್ಬರು ಪ್ರತಿಭಟನಾಕಾರರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಾವುಗಳ ಬಗ್ಗೆ ಪ್ರಧಾನಿ ಓಲಿ ಅವರು ದುಖಃ ವ್ಯಕ್ತಪಡಿಸಿದ್ದು, ಶಾಂತಿಯುತ ಪ್ರತಿಭಟನೆ ಹಿಂಸೆಗೆ ತಿರುಗಲು ವ್ಯವಸ್ಥಿತ ಪಿತೂರಿ ಕಾರಣ ಎಂದಿದ್ದಾರೆ. ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಅವರು, 15 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಪಾಲೆಸ್ತೀನ್ ಆಕ್ಷನ್’ ಬೆಂಬಲಿಸಿ ಪ್ರತಿಭಟನೆ: 890ಕ್ಕೂ ಹೆಚ್ಚು ಜನರನ್ನು ಭಯೋತ್ಪಾದನಾ ಕಾಯ್ದೆ ಬಂಧಿಸಿದ ಲಂಡನ್ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...