Homeಮುಖಪುಟಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

- Advertisement -
- Advertisement -

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ದಕ್ಷಿಣ ರೈಲ್ವೆ ಮತ್ತು ಸ್ಥಳೀಯ ಅಧಿಕಾರಿಗಳ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದಾರೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಘಟನೆಯಲ್ಲಿ 14 ಮಂದಿಗೆ ಹೆಚ್ಚಿನ ಗಾಯಗಳಾಗಿವೆ. ಅವರನ್ನು ಸ್ಥಳೀಯ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸರ್ಕಾರವು ತ್ವರಿತ ಪರಿಹಾರ ಮತ್ತು ರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿದೆ. ಗಾಯಗೊಂಡ ವ್ಯಕ್ತಿಗಳನ್ನು ತಕ್ಷಣವೇ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರಿಗೆ ಆಹಾರ ಮತ್ತು ಪರ್ಯಾಯ ಪ್ರಯಾಣ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲು ತಂಡವನ್ನು ರಚಿಸಲಾಗಿದೆ” ಎಂದು ನಿನ್ನೆ ರಾತ್ರಿಯೇ ಸಿಎಂ ತಿಳಿಸಿದ್ದರು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು , “ರೈಲು ಅಪಘಾತದ ಕುರಿತು ಮಾಹಿತಿ ದೊರೆತ ಕೂಡಲೇ ಸಚಿವ ಎಸ್‌.ಎಂ ನಾಸರ್ ಜೊತೆ ಜಿಲ್ಲಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಅಪಘಾತಗೊಂಡ ರೈಲು ಬೋಗಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ನಿರತವಾಗಿದೆ. ನಾನು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದೇನೆ” ಎಂದು ಮಾಹಿತಿ ನೀಡಿದ್ದರು.

ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಮಂಡಳಿ, “ರೈಲಿನ ಲೋಕೋ ಪೈಲಟ್ ಸಿಬ್ಬಂದಿ ಮತ್ತು ಗಾರ್ಡ್ ಸುರಕ್ಷಿತವಾಗಿದ್ದಾರೆ. ಸುಮಾರು 12-13 ಬೋಗಿಗಳು ಹಳಿ ತಪ್ಪಿವೆ. ಇಲ್ಲಿಯವರೆಗೆ, ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಆದರೆ, ಕೆಲವರಿಗೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ತಿಳಿಸಿದೆ.

ರೈಲು ಅಪಘಾತದ ಹಿನ್ನೆಲೆ, ಆ ಮಾರ್ಗಗವಾಗಿ ಸಾಗುವ ಎಂಟು ರೈಲುಗಳನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿಸಲಾಗಿದೆ ಮತ್ತು ಎರಡನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ : ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...