Homeಮುಖಪುಟವಾರಣಾಸಿ| ಯುವತಿ ಮೇಲೆ 23 ಜನರಿಂದ ಸಾಮೂಹಿಕ ಅತ್ಯಾಚಾರ; 9 ಮಂದಿಯ ಬಂಧನ

ವಾರಣಾಸಿ| ಯುವತಿ ಮೇಲೆ 23 ಜನರಿಂದ ಸಾಮೂಹಿಕ ಅತ್ಯಾಚಾರ; 9 ಮಂದಿಯ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಇದುವರೆಗೆ 9 ಜನರನ್ನು ಬಂಧಿಸಲಾಗಿದೆ ಎಂದು ವರದಿಗಳು ಬುಧವಾರ (ಏ.9) ಹೇಳಿದೆ.

ಮಾರ್ಚ್ 29ರಂದು ಸಂತ್ರಸ್ತ ಯುವತಿ ಸ್ನೇಹಿತರೊಂದಿಗೆ ಹೊರಗಡೆ ಹೋಗಿದ್ದರು. ಆಕೆ ವಾಪಸ್ ಬಂದಿಲ್ಲ ಎಂದು ಕುಟುಂಬಸ್ಥರು ಏಪ್ರಿಲ್ 4ರಂದು ದೂರು ದಾಖಲಿಸಿದ್ದರು. ಪೊಲೀಸರು ಹುಡುಕಾಟ ನಡೆಸಿ ಯುವತಿಯನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಆಕೆ ತನ್ನ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ಹೇಳಿಕೊಂಡಿರಲಿಲ್ಲ. ಆದರೆ, ಏಪ್ರಿಲ್ 6ರಂದು ಕುಟುಂಬಸ್ಥರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಆರೋಪಿಗಳು ಯುವತಿಯನ್ನು ಅಪಹರಿಸಿ, ಆಕೆಗೆ ಡ್ರಗ್ ಕೊಟ್ಟು ವಿವಿಧ ಹೋಟೆಲ್, ಹುಕ್ಕಾ ಬಾರ್‌ಗಳು ಮತ್ತು ಇತರ ಸ್ಥಳಗಳಲ್ಲಿ 6 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು 11 ಅನಾಮಧೇಯ ವ್ಯಕ್ತಿಗಳು ಸೇರಿದಂತೆ 23 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಕರಣದ ಒಂಬತ್ತು ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ ಎಂದು ವಾರಣಾಸಿ ಕಂಟೋನ್ಮೆಂಟ್‌ನ ಹೆಚ್ಚುವರಿ ಪೊಲೀಸ್ ಆಯುಕ್ತ ವಿದುಷ್ ಸಕ್ಸೇನಾ ಹೇಳಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳು ಶೋಧ ನಡೆಸುತ್ತಿವೆ. ಶೀಘ್ರದಲ್ಲೇ ಅವರನ್ನೂ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ ವಿಶ್ವಕರ್ಮ, ಸಮೀರ್, ಆಯುಷ್, ಸೊಹೈಲ್, ದಾನಿಶ್, ಅನ್ಮೋಲ್, ಸಾಜಿದ್, ಜಹೀರ್, ಇಮ್ರಾನ್, ಜೈಬ್, ಅಮನ್ ಮತ್ತು ರಾಜ್ ಖಾನ್ ಪ್ರಸ್ತುತ ಗುರುತಿಸಿರುವ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಪ್ರಸ್ತುತ ಆರೋಗ್ಯವಾಗಿದ್ದಾರೆ ಮತ್ತು ಪೊಲೀಸರು ಆಕೆಯ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸಕ್ಸೇನಾ ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬಸ್ಥರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. “ನಿಮಗೆ ಬೇಕಾದ ಮಾಹಿತಿ ಪೊಲೀಸರೊಂದಿಗೆ ಕೇಳಿ ಪಡೆದುಕೊಳ್ಳಿ” ಎಂದು ಆಕೆಯ ತಾಯಿ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...