Homeಮುಖಪುಟ1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ತನ್ನ ಪಾತ್ರಕ್ಕಾಗಿ ದೆಹಲಿ ಹೈಕೋರ್ಟ್‌ನಿಂದ 2018 ರಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸಜ್ಜನ್ ಕುಮಾರ್ ಅವರ ಆರೋಗ್ಯದ ಬಗ್ಗೆ ವಕೀಲರು ಎತ್ತಿದ ಕಳವಳಗಳನ್ನು ಬದಿಗೊತ್ತಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಇದು ಸಾಮಾನ್ಯ ಪ್ರಕರಣವಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹಿಂದೂ-ಸಿಖ್‌ ಸಮುದಾಯದ ಅರ್ಥಶಾಸ್ತ್ರಜ್ಞ ಗೆಳೆಯರಿಬ್ಬರೂ ಭಾರತದ ಪ್ರಸ್ತುತ ಸ್ಥಿತಿ ಕುರಿತು ಬರೆದ ಭಾವನಾತ್ಮಕ ಪತ್ರ.

“ಇದು ಸಣ್ಣ ಪ್ರಕರಣವಲ್ಲ. ನಾವು ನಿಮಗೆ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದರು. ಆದರೂ ಮುಖಾಮುಖಿ ವಿಚಾರಣೆ ಪುನರಾರಂಭವಾದ ಕೂಡಲೇ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವುದಾಗಿ ನ್ಯಾಯಪೀಠ ಹೇಳಿದೆ.

1984 ರ ಹತ್ಯಾಕಾಂಡದಲ್ಲಿ ಅವರ ಪಾತ್ರಕ್ಕಾಗಿ 2018 ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ 74 ವರ್ಷದ ರಾಜಕಾರಣಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಆಪರೇಷನ್‌ ‘ಬ್ಲೂ ಸ್ಟಾರ್‌’ ಮತ್ತು ಇಂದಿರಾ ಗಾಂಧಿ ಹತ್ಯೆಗೆ ಕಾರಣಗಳೇನು? ಹೇಗೆ ನಡೆಯಿತು.. ಪ್ರತ್ಯಕ್ಷದರ್ಶಿಯ ವರದಿ

ಸಜ್ಜನ್ ಅವರ ವಕೀಲ ವಿಕಾಸ್ ಸಿಂಗ್ ಕಕ್ಷಿದಾರ ಈಗಾಗಲೇ 18 ತಿಂಗಳು ಜೈಲಿನಲ್ಲಿದ್ದು, ಅವರ ಆರೋಗ್ಯ ಮತ್ತು ತೂಕವನ್ನು ಮರಳಿ ಪಡೆಯಲು ಒಂದು ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೇಳಿದ್ದರು.

“ಕೋರ್ಟ್ ಹೇರುವ ಯಾವುದೇ ಷರತ್ತನ್ನು ನಾನು ಪಾಲಿಸುತ್ತೇನೆ. ಕನಿಷ್ಠ 1 ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು” ಎಂದು ವಿಕಾಸ್ ಸಿಂಗ್ ಒತ್ತಿ ಹೇಳಿದ್ದರು.

ಸಿಖ್‌ ಗಲಭೆ ಸಂತ್ರಸ್ತರನ್ನು ಪ್ರತಿನಿಧಿಸುತ್ತಿದ್ದ ವಕೀಲರು ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ಅವರಿಗೆ ಜೈಲಿನಲ್ಲಿ ಉತ್ತಮ ಆರೈಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌‌ನ ಮಾರ್ಚ್ 11 ರ ವರದಿಯನ್ನು ಗಮನಿಸಿದ ನ್ಯಾಯಾಲಯ, ಸಜ್ಜನ್ ಅವರ ತೂಕವು ವಾಸ್ತವವಾಗಿ ಅವರು ಮಾಡಿದ ಪ್ರತಿಪಾದನೆಗೆ ವಿರುದ್ಧವಾಗಿದ್ದು, ಹೆಚ್ಚಾಗಿದೆ ಎಂದು ಹೇಳಿದೆ.


ಇದನ್ನೂ ಓದಿ: ಮೋದಿ ಸರ್ವಾಧಿಕಾರ ಇಂದಿರಾಗಾಂಧಿ ಸರ್ವಾಧಿಕಾರ ಒಂದೇನಾ?..: ಪ್ರಭಾತ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...