Homeಮುಖಪುಟ1987ರ ಹಾಶಿಂಪುರ ಹತ್ಯಾಕಾಂಡ ಪ್ರಕರಣ | 8 ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

1987ರ ಹಾಶಿಂಪುರ ಹತ್ಯಾಕಾಂಡ ಪ್ರಕರಣ | 8 ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

- Advertisement -
- Advertisement -

1987ರಲ್ಲಿ ಉತ್ತರ ಪ್ರದೇಶದ ಹಾಶಿಂಪುರದಲ್ಲಿ 42 ಮುಸ್ಲಿರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಎಂಟು ಅಪರಾಧಿಗಳಿಗೆ ಜಾಮೀನು ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ಅಪರಾಧಿಗಳು 2018 ರಿಂದ ಜೈಲಿನಲ್ಲಿದ್ದಾರೆ ಎಂದು ಹೇಳಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಅವರ ಖುಲಾಸೆಯನ್ನು ರದ್ದುಗೊಳಿಸಿತ್ತು. 1987ರ ಹಾಶಿಂಪುರ ಹತ್ಯಾಕಾಂಡ

1987ರ ಮೇ 22ರಂದು ನಡೆದ ಈ ಅಪರಾಧದಲ್ಲಿ ಉತ್ತರ ಪ್ರದೇಶ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ ಪೊಲೀಸರು ರಾಜ್ಯದ ಮೀರತ್ ಜಿಲ್ಲೆಯ ಹಾಶಿಂಪುರದಿಂದ 42 ಮುಸ್ಲಿರನ್ನು ಬಂಧಿಸಿ, ಲಾರಿಯಲ್ಲಿ ಕೂರಿಸಿ, ಹತ್ತಿರದ ಕಾಲುವೆಗೆ ಓಡಿಸಿ, ಅವರೆಲ್ಲರನ್ನೂ ಗುಂಡಿಕ್ಕಿ ನಂತರ ಶವಗಳನ್ನು ನೀರಿಗೆ ಎಸೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದು ನಡೆದು ಒಂದು ದಿನದ ನಂತರ, ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಯ ಸದಸ್ಯರೊಂದಿಗೆ ಗುಂಪೊಂದು ಮೀರತ್‌ನ ಮಲಿಯಾನಾ ಗ್ರಾಮವನ್ನು ಎಲ್ಲಾ ಕಡೆಯಿಂದ ಸುತ್ತುವರೆದು ಮುಸ್ಲಿಂ ಮಹಿಳೆಯ ಮತ್ತು ಮಕ್ಕಳು ಸೇರಿದಂತೆ ಎಲ್ಲರ ಮೇಲೆ ಗುಂಡು ಹಾರಿಸಿತ್ತು. 1987ರ ಹಾಶಿಂಪುರ ಹತ್ಯಾಕಾಂಡ

ಘಟನೆಯ ವಿಚಾರಣೆ ನಡೆಸಿದ್ದ 2015 ರ ವಿಚಾರಣಾ ನ್ಯಾಯಾಲಯವು ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿಯ 16 ಸಿಬ್ಬಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತು. ಆದರೆ ಅಕ್ಟೋಬರ್ 31, 2018 ರಂದು, ನ್ಯಾಯಮೂರ್ತಿಗಳಾದ ಎಸ್ ಮುರಳೀಧರ್ ಮತ್ತು ವಿನೋದ್ ಗೋಯೆಲ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಈ ತೀರ್ಪನ್ನು ತಳ್ಳಿಹಾಕಿತ್ತು.

ಶುಕ್ರವಾರ ನಾಲ್ವರು ಅಪರಾಧಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ಆನಂದ್ ತಿವಾರಿ ಅವರು, 2018 ರಲ್ಲಿ ಹೈಕೋರ್ಟ್‌ನ ತೀರ್ಪು ತಪ್ಪಾದ ಆಧಾರದ ಮೇಲೆ ಇದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದಾರೆ. ಮೇಲ್ಮನವಿ ಪ್ರಕ್ರಿಯೆಯಲ್ಲಿ ಅಪರಾಧಿಗಳ ವರ್ತನೆಯು ಅನುಕರಣೀಯವಾಗಿದೆ ಎಂದು ತಿವಾರಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂಕೋರ್ಟ್ ಅವರ ವಾದಗಳನ್ನು ಅಂಗೀಕರಿಸಿ ಎಂಟು ಅಪರಾಧಿಗಳ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...