Homeಮುಖಪುಟನಾಳೆ 19 ಉಪಗ್ರಹ ಉಡಾವಣೆ: ಒಂದು ಉಪಗ್ರಹದ ಮೇಲೆ ಮೋದಿ ಚಿತ್ರ!

ನಾಳೆ 19 ಉಪಗ್ರಹ ಉಡಾವಣೆ: ಒಂದು ಉಪಗ್ರಹದ ಮೇಲೆ ಮೋದಿ ಚಿತ್ರ!

- Advertisement -
- Advertisement -

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ವಾಣಿಜ್ಯ ಕಂಪನಿ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್)ಗಾಗಿ ಮೊದಲ ವಾಣಿಜ್ಯ ಪಿಎಸ್‌ಎಲ್‌ವಿ ಕಾರ್ಯಾಚರಣೆಯ ಭಾಗವಾಗಿ ಭಾನುವಾರ 19 ಉಪಗ್ರಹಗಳನ್ನು ಉಡಾಯಿಸಲು ಸಜ್ಜಾಗಿದೆ ಎಂದು ಪ್ರಿಂಟ್ ವರದಿ ಮಾಡಿದೆ.

ಪಿಎಸ್‌ಎಲ್‌ವಿ-ಸಿ 51 / ಅಮೆಝೋನಿಯಾ -1 ಮಿಷನ್ ಬ್ರೆಜಿಲ್‌ನ ಅಮೆಝೋನಿಯಾ -1 ಅನ್ನು ಪ್ರಾಥಮಿಕ ಪೇಲೋಡ್ ಆಗಿ ಸಾಗಿಸುತ್ತದೆ, ಜೊತೆಗೆ ಐದು ಭಾರತೀಯ ಉಪಗ್ರಹಗಳು ಸೇರಿದಂತೆ 18 ಇತರ ಅತಿಥಿ ಉಪಗ್ರಹಗಳನ್ನು ಸಾಗಿಸಲಿದೆ. ಒಂದು ನ್ಯಾನೋ ಉಪಗ್ರಹದ ಫಲಕದ ಮೇಲೆ ಪ್ರಧಾನಿ ಮೋದಿ ಭಾವಚಿತ್ರ ಸೇರಿಸಲಾಗಿದೆ.

ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್) ಕಂಪನಿಯನ್ನು ಬಾಹ್ಯಾಕಾಶ ಇಲಾಖೆಯ ಅಡಿಯಲ್ಲಿ ಮಾರ್ಚ್ 2019 ರಲ್ಲಿ ಸ್ಥಾಪಿಸಲಾಯಿತು. ಇದು ವಿವಿಧ ದೇಶಗಳಿಗಾಗಿ ಉಪಗ್ರಹಗಳನ್ನು ಹಾರಿಸುವ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿದೆ.

ಅಮೇರಿಕನ್ ಕಂಪನಿ ಸ್ಪೇಸ್‌ಫ್ಲೈಟ್ ಜೊತೆಗಿನ ವಾಣಿಜ್ಯ ಒಪ್ಪಂದದ ಮೂಲಕ ಎನ್‌ಎಸ್‌ಐಎಲ್ ಈ ಕಾರ್ಯಾಚರಣೆಯನ್ನು ನಡೆಸುತ್ತಿದೆ. ರಾಕೆಟ್‌ನಲ್ಲಿ ಐದು ಭಾರತೀಯ ಉಪಗ್ರಹಗಳು ಸಾಗಲಿವೆ.

ಪ್ಯಾನೆಲ್ ಮೇಲೆ ಮೋದಿ ಚಿತ್ರ!

ಸತೀಶ್ ಧವನ್ ಎಸ್‌ಎಟಿ (ಎಸ್‌ಡಿಎಸ್‌ಎಟಿ) ಒಂದು ನ್ಯಾನೊ ಉಪಗ್ರಹವಾಗಿದ್ದು, ಇದು ಬಾಹ್ಯಾಕಾಶ ಹವಾಮಾನ, ಮ್ಯಾಗ್ನೆಟೋಸ್ಪಿಯರ್, ವಿಕಿರಣ ಮಟ್ಟಗಳು ಮತ್ತು ದೀರ್ಘ-ವ್ಯಾಪ್ತಿಯ ಸಂವಹನಕ್ಕೆ ಸಹಾಯ ಮಾಡುತ್ತದೆ. ಇದನ್ನು ಸ್ಪೇಸ್ ಕಿಡ್ಜ್ ಇಂಡಿಯಾ ನಿರ್ಮಿಸಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೆತ್ತನೆಯ ಚಿತ್ರವನ್ನು ಉಪಗ್ರಹದ ಮೇಲಿನ ಫಲಕದಲ್ಲಿ ಮತ್ತು ಭಗವದ್ಗೀತೆಯನ್ನು ಒಂದು ಫ್ಲ್ಯಾಷ್‌ನಲ್ಲಿ ಸೇರಿಸಲಾಗಿದೆ.

“ಅವರ ಆತ್ಮನಿರ್ಭರ್ ಉಪಕ್ರಮ ಮತ್ತು ಬಾಹ್ಯಾಕಾಶ ಖಾಸಗೀಕರಣಕ್ಕೆ ಐಕಮತ್ಯ ಮತ್ತು ಕೃತಜ್ಞತೆಯನ್ನು ತೋರಿಸಲು ಮೋದಿ ಚಿತ್ರ ಹಾಕಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಭಗವದ್ಗೀತೆಯನ್ನು “ಭಾರತದ ಸರ್ವೋಚ್ಚ ಮಹಾಕಾವ್ಯ” ಮತ್ತು “ವಸುದೈವ ಕುಟುಂಬಕಂ” ಕಲ್ಪನೆಯನ್ನು ಗೌರವಿಸಲು ಸೇರಿಸಲಾಗಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಟ್ವಿಟರ್ ಬಿಡುತ್ತೇನೆ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...