ವಿಶ್ವದ ಅತಿದೊಡ್ಡ ಗುತ್ತಿಗೆ ಎಲೆಕ್ಟ್ರಾನಿಕ್ಸ್ ತಯಾರಕ ತೈವಾನ್‌ನ ಫಾಕ್ಸ್‌ಕಾನ್, ಬೆಂಗಳೂರಿನ ಬಳಿಯಿರುವ ತನ್ನ ಸೆಲ್ ಫೋನ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ ಎಂದು ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜ್ ಬುಧವಾರ ವಿಧಾನಸಭೆಯಲ್ಲಿ ದೂರಿದ್ದಾರೆ. ಸಿಎಂ ಸಿದ್ದರಾಮಯ್ಯ
ಆಪಲ್ ಉತ್ಪನ್ನಗಳ ಪ್ರಮುಖ ಪೂರೈಕೆದಾರ ಸಂಸ್ಥೆಯಾದ ಫಾಕ್ಸ್‌ಕಾನ್, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕುಗಳ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶದ (ಐಟಿಐಆರ್) 300 ಎಕರೆ ಜಮೀನಿನಲ್ಲಿರುವ ತನ್ನ ಘಟಕದಲ್ಲಿ ಐಫೋನ್‌ಗಳನ್ನು ತಯಾರಿಸಲಿದೆ. ಸಿಎಂ ಸಿದ್ದರಾಮಯ್ಯ
2025-26ರ ಬಜೆಟ್‌ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಾಕ್ಸ್‌ಕಾನ್ ದೇವನಹಳ್ಳಿಯಲ್ಲಿ ತನ್ನ ಉತ್ಪಾದನಾ ಘಟಕವನ್ನು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಿಸಿದೆ ಎಂದು ಹೇಳಿದರು. “ಈ ಕಂಪನಿಗೆ 6,970 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುವುದು” ಎಂದು ಸಿಎಂ ಇದೇ ವೇಳೆ ಘೋಷಿಸಿದ್ದರು.
ಬಜೆಟ್ ಕುರಿತು ಮಾತನಾಡಿದ ಮುನಿರಾಜ್, “ಫಾಕ್ಸ್‌ಕಾನ್ ಘಟಕದಲ್ಲಿ 25,000 ಜನರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರಲ್ಲಿ ಎಷ್ಟು ಮಂದಿ ನನ್ನ ತಾಲ್ಲೂಕಿನವರು ಇದ್ದಾರೆ? ಅವರಲ್ಲಿ ಎಷ್ಟು ಮಂದಿ ಭೂಮಿ ಕಳೆದುಕೊಳ್ಳುವ ರೈತರು ಇದ್ದಾರೆ? ದೊಡ್ಡಬಳ್ಳಾಪುರದ 500 ಜನರಿಗೆ ಸಹ ಆ ಕಂಪೆನಿಗೆ ಉದ್ಯೋಗ ನೀಡಲಾಗಿಲ್ಲ” ಎಂದು ಹೇಳಿದ್ದಾರೆ.
ಒಂದು ಲಕ್ಷ ಉದ್ಯೋಗಗಳ ಭರವಸೆ ನೀಡಿದ ಫಾಕ್ಸ್‌ಕಾನ್ ಹೆಚ್ಚಾಗಿ ಇತರ ರಾಜ್ಯಗಳ ಜನರನ್ನು ನೇಮಿಸಿಕೊಳ್ಳುತ್ತಿದೆ ಎಂದು ಮುನಿರಾಜ್ ಹೇಳಿದ್ದಾರೆ. ಕೆಐಎಡಿಬಿ ಭೂಮಿಯಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳು ಸ್ಥಳೀಯ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವಂತೆ ಮುನಿರಾಜ್ ಸರ್ಕಾರವನ್ನು ಕೇಳಿದ್ದಾರೆ.
“ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) 6,000 ಎಕರೆಗಳನ್ನು ಸ್ವಾಧೀನಪಡಿಸಿಕೊಂಡಿದೆ ಮತ್ತು ದೊಡ್ಡಬಳ್ಳಾಪುರದಲ್ಲಿ 1,500 ಎಕರೆಗಳನ್ನು ಐಟಿ/ಬಿಟಿ ವಲಯವಾಗಿ ಕಾಯ್ದಿರಿಸಲಾಗಿದೆ” ಎಂದು ಮುನಿರಾಜ್ ಹೇಳಿದ್ದಾರೆ.
“ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರತಿ ವರ್ಷ 1,300 ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಕೆಐಎಡಿಬಿ ಭೂಮಿಯಲ್ಲಿ ಮುಂಬರುವ ಕೈಗಾರಿಕೆಗಳು ಸ್ಥಳೀಯ ವಿದ್ಯಾರ್ಥಿಗಳು ಮತ್ತು ಆ ತಾಲ್ಲೂಕು ಅಥವಾ ಜಿಲ್ಲೆಯ ಜನರಿಗೆ ಉದ್ಯೋಗ ನೀಡಬೇಕು ಎಂಬ ಹೊಸ ನಿಯಮಗಳನ್ನು ಸರ್ಕಾರ ರೂಪಿಸಬೇಕು” ಎಂದು ಮುನಿರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ
‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

