Homeಕರ್ನಾಟಕಸಿಎಂ ಸಿದ್ದರಾಮಯ್ಯ ಸಬ್ಸಿಡಿ ಘೋಷಿಸಿದ ಫಾಕ್ಸ್‌ಕಾನ್ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ: ಬಿಜೆಪಿ ಶಾಸಕ

ಸಿಎಂ ಸಿದ್ದರಾಮಯ್ಯ ಸಬ್ಸಿಡಿ ಘೋಷಿಸಿದ ಫಾಕ್ಸ್‌ಕಾನ್ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ: ಬಿಜೆಪಿ ಶಾಸಕ

- Advertisement -
- Advertisement -

ವಿಶ್ವದ ಅತಿದೊಡ್ಡ ಗುತ್ತಿಗೆ ಎಲೆಕ್ಟ್ರಾನಿಕ್ಸ್ ತಯಾರಕ ತೈವಾನ್‌ನ ಫಾಕ್ಸ್‌ಕಾನ್, ಬೆಂಗಳೂರಿನ ಬಳಿಯಿರುವ ತನ್ನ ಸೆಲ್ ಫೋನ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ ಎಂದು ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜ್ ಬುಧವಾರ ವಿಧಾನಸಭೆಯಲ್ಲಿ ದೂರಿದ್ದಾರೆ. ಸಿಎಂ ಸಿದ್ದರಾಮಯ್ಯ

ಆಪಲ್ ಉತ್ಪನ್ನಗಳ ಪ್ರಮುಖ ಪೂರೈಕೆದಾರ ಸಂಸ್ಥೆಯಾದ ಫಾಕ್ಸ್‌ಕಾನ್, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕುಗಳ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶದ (ಐಟಿಐಆರ್) 300 ಎಕರೆ ಜಮೀನಿನಲ್ಲಿರುವ ತನ್ನ ಘಟಕದಲ್ಲಿ ಐಫೋನ್‌ಗಳನ್ನು ತಯಾರಿಸಲಿದೆ. ಸಿಎಂ ಸಿದ್ದರಾಮಯ್ಯ

2025-26ರ ಬಜೆಟ್‌ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಾಕ್ಸ್‌ಕಾನ್ ದೇವನಹಳ್ಳಿಯಲ್ಲಿ ತನ್ನ ಉತ್ಪಾದನಾ ಘಟಕವನ್ನು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಿಸಿದೆ ಎಂದು ಹೇಳಿದರು. “ಈ ಕಂಪನಿಗೆ 6,970 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುವುದು” ಎಂದು ಸಿಎಂ ಇದೇ ವೇಳೆ ಘೋಷಿಸಿದ್ದರು.

ಬಜೆಟ್ ಕುರಿತು ಮಾತನಾಡಿದ ಮುನಿರಾಜ್, “ಫಾಕ್ಸ್‌ಕಾನ್ ಘಟಕದಲ್ಲಿ 25,000 ಜನರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರಲ್ಲಿ ಎಷ್ಟು ಮಂದಿ ನನ್ನ ತಾಲ್ಲೂಕಿನವರು ಇದ್ದಾರೆ? ಅವರಲ್ಲಿ ಎಷ್ಟು ಮಂದಿ ಭೂಮಿ ಕಳೆದುಕೊಳ್ಳುವ ರೈತರು ಇದ್ದಾರೆ? ದೊಡ್ಡಬಳ್ಳಾಪುರದ 500 ಜನರಿಗೆ ಸಹ ಆ ಕಂಪೆನಿಗೆ ಉದ್ಯೋಗ ನೀಡಲಾಗಿಲ್ಲ” ಎಂದು ಹೇಳಿದ್ದಾರೆ.

ಒಂದು ಲಕ್ಷ ಉದ್ಯೋಗಗಳ ಭರವಸೆ ನೀಡಿದ ಫಾಕ್ಸ್‌ಕಾನ್ ಹೆಚ್ಚಾಗಿ ಇತರ ರಾಜ್ಯಗಳ ಜನರನ್ನು ನೇಮಿಸಿಕೊಳ್ಳುತ್ತಿದೆ ಎಂದು ಮುನಿರಾಜ್ ಹೇಳಿದ್ದಾರೆ. ಕೆಐಎಡಿಬಿ ಭೂಮಿಯಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳು ಸ್ಥಳೀಯ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವಂತೆ ಮುನಿರಾಜ್ ಸರ್ಕಾರವನ್ನು ಕೇಳಿದ್ದಾರೆ.

“ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) 6,000 ಎಕರೆಗಳನ್ನು ಸ್ವಾಧೀನಪಡಿಸಿಕೊಂಡಿದೆ ಮತ್ತು ದೊಡ್ಡಬಳ್ಳಾಪುರದಲ್ಲಿ 1,500 ಎಕರೆಗಳನ್ನು ಐಟಿ/ಬಿಟಿ ವಲಯವಾಗಿ ಕಾಯ್ದಿರಿಸಲಾಗಿದೆ” ಎಂದು ಮುನಿರಾಜ್ ಹೇಳಿದ್ದಾರೆ.

“ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರತಿ ವರ್ಷ 1,300 ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಕೆಐಎಡಿಬಿ ಭೂಮಿಯಲ್ಲಿ ಮುಂಬರುವ ಕೈಗಾರಿಕೆಗಳು ಸ್ಥಳೀಯ ವಿದ್ಯಾರ್ಥಿಗಳು ಮತ್ತು ಆ ತಾಲ್ಲೂಕು ಅಥವಾ ಜಿಲ್ಲೆಯ ಜನರಿಗೆ ಉದ್ಯೋಗ ನೀಡಬೇಕು ಎಂಬ ಹೊಸ ನಿಯಮಗಳನ್ನು ಸರ್ಕಾರ ರೂಪಿಸಬೇಕು” ಎಂದು ಮುನಿರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...