Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...