Homeಕೊರೊನಾ2.38 ಲಕ್ಷ ಹೊಸ ಕೋವಿಡ್ ಪ್ರಕರಣಗಳು: 19.65% ರಿಂದ 14.43% ಕ್ಕಿಳಿದ ಪಾಸಿಟಿವಿಟಿ ದರ

2.38 ಲಕ್ಷ ಹೊಸ ಕೋವಿಡ್ ಪ್ರಕರಣಗಳು: 19.65% ರಿಂದ 14.43% ಕ್ಕಿಳಿದ ಪಾಸಿಟಿವಿಟಿ ದರ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2.38 ಲಕ್ಷ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇಕಡಾ 19.65 ರಿಂದ ಶೇಕಡಾ 14.43 ಕ್ಕೆ ಇಳಿದಿದೆ.

ಇಂದು ಬೆಳಿಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಬುಲೆಟಿನ್ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 17.36 ಲಕ್ಷದಷ್ಟಿದ್ದು, ಚೇತರಿಕೆ ಪ್ರಕರಣಗಳ ದರವು ಶೇಕಡಾ 94 ಕ್ಕಿಂತ ಹೆಚ್ಚಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 1.57 ಲಕ್ಷ ಜನರು ಚೇತರಿಕೆಯನ್ನು ಕಂಡಿದ್ದು, ಇಲ್ಲಿಯವರೆಗೆ ಒಟ್ಟು ಚೇತರಿಕೆಯ ಸಂಖ್ಯೆ 3 ಕೋಟಿಗೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 310 ಜನ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 16.49  ಮಾದರಿಗಳನ್ನು ಪರೀಕ್ಷಿಸಲಾಗಿದ್ದು  ಹಿಂದಿನ ದಿನಕ್ಕಿಂತ 3.35 ಲಕ್ಷ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸರ್ಕಾರದ ಉನ್ನತ ವೈದ್ಯಕೀಯ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಕೋವಿಡ್ ರೋಗಿಗಳ ಸಂಪರ್ಕಗಳನ್ನು ಹೆಚ್ಚಿನ ಅಪಾಯ ಎಂದು ಗುರುತಿಸದ ಹೊರತು ಪರೀಕ್ಷಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಈ ಸಲಹೆಯು ಪ್ರಕರಣಗಳು ಹುಟ್ಟುಹಾಕುವ  ಭಯವನ್ನು ಕಡಿಮೆ ಮಾಡುವುದಲ್ಲದೇ, ರೋಗಲಕ್ಷಣಗಳಿಲ್ಲದ ಕಾರಣ ಜನರನ್ನು ಪರೀಕ್ಷಾ ಕೇಂದ್ರಗಳಿಂದ ದೂರವಿಡುವ ನಿದರ್ಶನವಾಗಿದೆ.

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 158 ಕೋಟಿ ಡೋಸ್‌ಗಳಷ್ಟು ವಾಕ್ಸಿನೇಷನ್  ನಿರ್ವಹಿಸಲಾಗಿದೆ. ಆದರೆ ದೇಶದಲ್ಲಿ ಕೋವಿಡ್ ಸೋಂಕಿನ ಮೂರನೇ ಅಲೆಯ ದಿನನಿತ್ಯದ ಪ್ರಕರಣಗಳ ಸಂಖ್ಯೆಯಲ್ಲಿ  ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಮುಂಬೈ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ನಗರಗಳಲ್ಲಿ ಕಂಡುಬರುತ್ತಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...