Homeಮುಖಪುಟದೆಹಲಿಯ ನೋಯ್ಡಾದಲ್ಲಿ ಭಾರಿ ಬೆಂಕಿ ಅನಾಹುತ: ಇಬ್ಬರು ಮಕ್ಕಳು ಬಲಿ

ದೆಹಲಿಯ ನೋಯ್ಡಾದಲ್ಲಿ ಭಾರಿ ಬೆಂಕಿ ಅನಾಹುತ: ಇಬ್ಬರು ಮಕ್ಕಳು ಬಲಿ

- Advertisement -
- Advertisement -

ದೆಹಲಿಯ ನೋಯ್ಡಾದ ಸೆಕ್ಟರ್ 63 ಬಳಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ಮೂರು ವರ್ಷದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಇಬ್ಬರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ನೋಯ್ಡಾದ ಬಹಲೋಲ್‌ಪುರ್‌ ಪ್ರದೇಶದಲ್ಲಿ ಆಕಸ್ಮಿಕ ಕಾರಣಗಳಿಂದ ಹಲವಾರು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸ್ ಕಮಿಷನರೇಟ್ ಗೌತಮ್ ಬುದ್ಧ ನಗರ (ನೋಯ್ಡಾ ಪೊಲೀಸ್) ಅವರ ಅಧಿಕೃತ ಟ್ವಿಟರ್ ಖಾತೆ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

“ನೋಯ್ಡಾ-3 ಪೊಲೀಸ್ ಠಾಣೆ ವ್ಯಾಪ್ತಿಯ ಬಹಲಲ್‌ಪುರ್‌ ಗ್ರಾಮದಲ್ಲಿ ಕೊಳೆಗೇರಿಯ ಗುಡಿಸಲುಗಳು ಆಕಸ್ಮಿಕ ಕಾರಣಗಳಿಂದ ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಬೆಂಕಿ ಹಬ್ಬಿರುವ ವೀಡಿಯೊಗಳು ಮತ್ತು ಚಿತ್ರಗಳನ್ನು ನೋಯ್ಡಾದ ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಗಾಳಿಯಲ್ಲಿ ಹಬ್ಬುತ್ತಿರುವ ದಟ್ಟವಾದ ಹೊಗೆಯ ಚಿತ್ರಗಳನ್ನು ನಗರದ ವಿವಿಧ ಪ್ರದೇಶಗಳಿಂದ ಸೆರೆ ಹಿಡಿಯಲಾಗಿದೆ.


ಇದನ್ನೂ ಓದಿ: ಲಸಿಕೆ ನಿರ್ಬಂಧಗಳನ್ನು ತೆಗೆಯಿರಿ, ಪರಿಸ್ಥಿತಿ ಆತಂಕಕಾರಿಯಾಗಿದೆ- ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...