Homeಮುಖಪುಟಅಸ್ಸಾಂ | ತೆರವು ಕಾರ್ಯಾಚರಣೆ ವೇಳೆ ಘರ್ಷಣೆ : ಪೊಲೀಸರ ಗುಂಡಿಗೆ ಇಬ್ಬರು ಬಲಿ

ಅಸ್ಸಾಂ | ತೆರವು ಕಾರ್ಯಾಚರಣೆ ವೇಳೆ ಘರ್ಷಣೆ : ಪೊಲೀಸರ ಗುಂಡಿಗೆ ಇಬ್ಬರು ಬಲಿ

- Advertisement -
- Advertisement -

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ ಗುರುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಕಮ್ರೂಪ್ (ಮೆಟ್ರೋಪಾಲಿಟನ್) ಜಿಲ್ಲೆಯಲ್ಲಿ ಆಪಾದಿತ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಈ ಘಟನೆ ಸಂಭವಿಸಿದೆ. ಜಿಲ್ಲೆಯ ಕೊಚುತೊಲಿ ಗ್ರಾಮದಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಂ ಗ್ರಾಮಸ್ಥರನ್ನು ತೆರವುಗೊಳಿಸಲು ಸೋನಾಪುರ ಸರ್ಕಲ್‌ನ ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.

ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಹರಿತವಾದ ಆಯುಧಗಳು, ದೊಣ್ಣೆ ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದು, ಪರಿಣಾಮ ಮ್ಯಾಜಿಸ್ಟ್ರೇಟ್ ಮತ್ತು 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಪೊಲೀಸ್ ವಾಹನಕ್ಕೂ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ.

ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

“ತೆರವು ಕಾರ್ಯಾಚರಣೆ ಶಾಂತಿಯುತವಾಗಿ ನಡೆಯುತ್ತಿತ್ತು. ಕಾಂಗ್ರೆಸ್‌ ಕಾರ್ಯಾಚರಣೆಯನ್ನು ವಿರೋಧಿಸಲು ಆರಂಭಿಸಿದಾಗ ಪರಿಸ್ಥಿತಿ ಹದಗೆಟ್ಟಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಹಾಗೂ ಸರ್ಕಾರಿ ಅಧಿಕಾರಿಗಳ ತಂಡದ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಮೃತರನ್ನು ಜುಬಾಹಿರ್ ಅಲಿ ಮತ್ತು ಹೈದರ್ ಅಲಿ ಎಂದು ಗುರುತಿಸಲಾಗಿದೆ. ಸೋನಾಪುರ ಸರ್ಕಲ್ ಅಧಿಕಾರಿ ನಿತುಲ್ ಖತಾನಿಯಾರ್, ಉಪ ಪೊಲೀಸ್ ಆಯುಕ್ತ (ಪೂರ್ವ) ಮೃಣಾಲ್ ದೇಕಾ ಮತ್ತು ಸೋನಾಪುರ ಪೊಲೀಸ್ ಠಾಣೆ ಪ್ರಭಾರಿ ಅಧಿಕಾರಿ ಹಿರಾಕ್ ಜ್ಯೋತಿ ಸೈಕಿಯಾ ಗಾಯಗೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಘಟನೆ ಬಳಿಕ ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...