Homeಮುಖಪುಟಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

ಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

- Advertisement -
- Advertisement -

ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಹಾಸ್ಟೆಲ್‌ವೊಂದರಲ್ಲಿ ನಡೆದಿದ್ದು, ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ಕುಟುಂಬಸ್ಥರು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮೃತ ವಿದ್ಯಾರ್ಥಿಗಳು, ಭೋಂಗಿರ್‌ನಲ್ಲಿರುವ ತಮ್ಮ ಹಾಸ್ಟೆಲ್ ಬಳಿಯ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದರು. ಅವರಿಬ್ಬರ ಕುಟುಂಬಗಳು ನಗರದಲ್ಲಿ ವಾಸವಾಗಿತ್ತು. ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ತೆಲಂಗಾಣ ಸರ್ಕಾರದ ಅಧೀನದ ಪರಿಶಿಷ್ಟ ಜಾತಿಗಳ(ಎಸ್‌ಸಿ) ಹಾಸ್ಟೆಲ್‌ನಲ್ಲಿ ಜೂನಿಯರ್ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರು ಕ್ರಮವನ್ನು ಕೈಗೊಂಡಿದ್ದರು ಎನ್ನಲಾಗಿದೆ. ಆದರೆ 10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಪತ್ರವನ್ನು ಬರದಿದ್ದು, ಶಿಕ್ಷಕರೊಬ್ಬರು ತಾವು ಭಾಗಿಯಾಗದ ಪ್ರಕರಣದಲ್ಲಿ ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮನ್ನು ಯಾರೂ ನಂಬುವುದಿಲ್ಲ, ನಾವು ಮಾಡದ ಕೆಲಸಕ್ಕಾಗಿ ನಮ್ಮ ಮೇಲೆ ಆರೋಪಿಸಲಾಗಿದೆ. ಇದನ್ನು ಸಹಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಅಂತ್ಯಕ್ರಿಯೆಯನ್ನು ಒಟ್ಟಿಗೆ ಮಾಡಿ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆಯಲಾಗಿದೆ.

ಈ ಬಗ್ಗೆ ಶಿಕ್ಷಣಾಧಿಕಾರಿ ನಾರಾಯಣರೆಡ್ಡಿ ಮಾತನಾಡಿದ್ದು, ಇಬ್ಬರು ಬಾಲಕಿಯರ ವಿರುದ್ಧ ಕಿರಿಯ ತರಗತಿಗಳ ವಿದ್ಯಾರ್ಥಿಗಳು ದೂರು ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದರೂ ಅದು ಸಣ್ಣಪುಟ್ಟ ಸಮಸ್ಯೆಯಾಗಿತ್ತು. ಬಳಿಕ ಬಾಲಕಿಯರಿಗೆ ಬುದ್ದಿವಾದ ಹೇಳಲಾಗಿದೆ. ಆದರೆ ಈ ಘಟನೆಯಿಂದ ಬಾಲಕಿಯರು ತೀವ್ರವಾಗಿ ವಿಚಲಿತರಾಗಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಹಾಸ್ಟೆಲ್ ವಾರ್ಡನ್ ಶೈಲಜಾ ಅವರ ಹೆಸರನ್ನು ಆತ್ಮಹತ್ಯೆ ಪತ್ರದಲ್ಲಿ ಬಾಲಕಿಯರು ಉಲ್ಲೇಖಿಸಿದ್ದಾರೆ. ನಮ್ಮನ್ನು ಯಾರೂ ನಂಬಿರಲಿಲ್ಲ. ಶೈಲಜಾ ಮೇಡಮ್ (ಹಾಸ್ಟೆಲ್ ವಾರ್ಡನ್) ಮಾತ್ರ ನಮ್ಮನ್ನು ನಂಬಿದ್ದರು. ನಮ್ಮ ಮೇಲೆ ಆರೋಪ ಮಾತ್ರ ಮಾಡಲಾಗಿದೆ, ಆದರೆ ನಾವು ಆ ಕೃತ್ಯವನ್ನು ಮಾಡಿಲ್ಲ. ನಾವು ಮಾಡದ ಕೆಲಸಕ್ಕೆ ನಮ್ಮನ್ನು ಆರೋಪಿಸಿರುವುದರಿಂದ ಅವಮಾನವಾಗಿದೆ ಮತ್ತು ಮುಜುಗರವಾಗಿದೆ, ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಈ ಬಗ್ಗೆ ವಾರ್ಡನ್ ಮತ್ತು ಜಿಲ್ಲಾ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಬ್ಬರು ಹೆಣ್ಣುಮಕ್ಕಳು ಈ ಪತ್ರವನ್ನು ಬರೆದಿರುವುದು ನಮಗೆ ನಂಬಲು ಸಾಧ್ಯವಾಗುತ್ತಿಲ್ಲ, ಬಾಲಕಿಯರ ವಿರುದ್ಧ ದೂರುಗಳು ಬಂದಾಗ ಶಿಕ್ಷಕರು ಮತ್ತು ವಾರ್ಡನ್‌ ಏಕೆ ನಮಗೆ ಕರೆ ಮಾಡಿ ಮಾಹಿತಿ ನೀಡಲಿಲ್ಲ ಎಂದು ನಮಗೆ ಅರ್ಥವಾಗುತ್ತಿಲ್ಲ, ಪೊಲೀಸರು ಈ ಬಗ್ಗೆ ತನಿಖೆ ಮಾಡಬೇಕು ಎಂದು ಮೃತ ಬಾಲಕಿಯರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

 

 

 

 

 

 

 

 

 

 

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...