Homeಮುಖಪುಟಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು

- Advertisement -
- Advertisement -

ರಾಜಸ್ಥಾನದಲ್ಲಿ ಲಂಚ ಸ್ವೀಕರಿಸುವಾಗ ಇಬ್ಬರು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.

ಚಿಟ್ ಫಂಡ್ ವಿಚಾರದಲ್ಲಿ ಪ್ರಕರಣ ದಾಖಲಿಸದಿರಲು ಇಬ್ಬರು ಅಧಿಕಾರಿಗಳು 15 ಲಕ್ಷ ಲಂಚ ತೆಗೆದುಕೊಂಡಿದ್ದಾರೆ. ಇಡಿ ಅಧಿಕಾರಿಗಳು ಹಣವನ್ನು ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಹೇಳಿಕೆಯಲ್ಲಿ ತಿಳಿಸಿದೆ.

ಇಬ್ಬರು ಇಡಿ ಇನ್ಸ್‌ಪೆಕ್ಟರ್‌ಗಳು 15 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಎಸಿಬಿಯ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಇಡಿ ಇನ್ಸ್‌ಪೆಕ್ಟರ್‌ಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿಸಿದೆ.

ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಆರೋಪದ ಪ್ರಕರಣದಲ್ಲಿ ಇಡಿ ಅ.30 ರಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನ.25ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇಡಿ ಅಧಿಕಾರಿಗಳ ಈ ಕ್ರಮವನ್ನು ಗೆಹ್ಲೋಟ್ ಸರ್ಕಾರವು ಪ್ರತಿಕಾರದ ರಾಜಕೀಯ ಎಂದು ಕರೆದಿತ್ತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುಪಯೋಗದಿಂದಾಗಿ ಕೇಂದ್ರೀಯ ಸಂಸ್ಥೆಗಳು ತಮ್ಮ ವಿಶ್ವಾಸಾರ್ಹತೆಯನ್ನು ಕಳೆದುಕೊಂಡು ಚಿಂತಾಜನಕ ಪರಿಸ್ಥಿತಿಯಲ್ಲಿದೆ ಎಂದು ಗೆಹ್ಲೋಟ್ ಹೇಳಿದ್ದರು.

ರಾಷ್ಟ್ರ ರಾಜಧಾನಿಯಲ್ಲೂ ಇಡಿ ಅಧಿಕಾರಿಗಳು ಭಾರೀ ಸದ್ದು ಮಾಡಿದ್ದರು. ಮದ್ಯ ನೀತಿ ಪ್ರಕರಣದಲ್ಲಿ ಇಡಿ ಅರವಿಂದ್‌ ಕೇಜ್ರಿವಾಲ್‌ಗೆ ನೊಟೀಸ್‌ ನೀಡಿದೆ. ಇದರ ಬಗ್ಗೆ ಎಎಪಿ,  ಮೋದಿ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಯಾಲಯ ಈ ಬಗ್ಗೆ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...