Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...