ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕೈಸರ್‌ಗಂಜ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ನಡೆದಿದೆ.
ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯಲ್ಲಿರುವ ಬೈಕುಂತ್ ಪದವಿ ಕಾಲೇಜು ಬಳಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಫಾರ್ಚೂನರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.
ತನ್ನ ಮಗ 17 ವರ್ಷದ ಮಗ ರೆಹಾನ್ ಮತ್ತು 24 ವರ್ಷದ ಸೋದರಳಿಯ ಶಹಜಾದೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಎಸ್‌ಯುವಿ ಢಿಕ್ಕಿ ಹೊಡೆದಿದೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ದೂರುದಾರರಾದ ಚಂದಾ ಬೇಗಂ ಅವರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕನನ್ನು ಬಂಧಿಸಿದ್ದಾರೆ. ಕರಣ್ ಭೂಷಣ್ ಸಿಂಗ್ ಬೆಂಗಾವಲು ವಾಹನದ ಜೊತೆ ಪ್ರಯಾಣಿಸುತ್ತಿದ್ದರೆ ಎಂಬ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.
ಕರಣ್ ಭೂಷಣ್ ಸಿಂಗ್ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಕಾರಣ ಅವರ ಪುತ್ರನಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪವಿದ್ದರೂ ಆತನ ಕುಟುಂಬಕ್ಕೆ ಟಿಕೆಟ್ ನೀಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಈ ಬಗ್ಗೆ ಸಾರ್ವಜನಿಕ ಹೇಳಿಕೆಯನ್ನು ಕೂಡ ನೀಡಿದ್ದರು.
ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು, ಪೊಲೀಸರು ಅಪಘಾತವೆಸಗಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
VIDEO | Uttar Pradesh: At least two people were killed when a speeding escort vehicle in the convoy of BJP's #Gonda Lok Sabha seat candidate Karan Bhushan Singh hit them, earlier today.
(Full video available on PTI Videos – https://t.co/dv5TRAShcC) pic.twitter.com/HojywbG4Nz
— Press Trust of India (@PTI_News) May 29, 2024
आज दिनांक 29/05/24 को थानाक्षेत्र कर्नलगंज में फॉर्च्यूनर कार की मोटरसाइकिल से हुई दुर्घटना के संबंध में अपर पुलिस अधीक्षक गोण्डा पश्चिमी की बाइट- pic.twitter.com/7b3TMj8TKW
— Gonda Police (@gondapolice) May 29, 2024
ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್ ನಳಿನ್ ಯಾದವ್


