Homeಮುಖಪುಟಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ರವೀಂದ್ರ ಭಟ್ಟಾಚಾರ್ಯ ಅವರನ್ನು ಬದಲಿಸಿ  ಬೇರೆ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೇ, ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ, ಭಟ್ಟಾಚಾರ್ಯರನ್ನು ಸೋಲಿಸಲಾಗುವುದು ಎಂದು ಕಾರ್ಯಕರ್ತರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. 

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರಿದ ನಾಯಕರಿಗೆ ಕೆಲವೇ ದಿನದಲ್ಲಿ ಟಿಕೆಟ್ ನೀಡಿರುವುದಕ್ಕೆ ಆಕ್ರೋಶಗೊಂಡ ಕಾರ್ಯಕರ್ತರು ಇಬ್ಬರು ನಾಯಕರನ್ನು ಕೊಠಡಿಯಲ್ಲಿ ಕೂಡಿ ಬೀಗ ಹಾಕಿದ ಘಟನೆ ಪಶ್ಚಿಮ ಬಂಗಾಳದ ಸಿಂಗೂರ್‌ನಲ್ಲಿ ನಡೆದಿದೆ.

ಮಧ್ಯಪ್ರದೇಶದ ಆರೋಗ್ಯ ಮತ್ತು ಶಿಕ್ಷಣ ಸಚಿವ ಬಿಸ್ವಾಸ್ ಸರಂಜೆ ಮತ್ತು ಉತ್ತರ ಪ್ರದೇಶದ ಹಿರಿಯ ಬಿಜೆಪಿ ಮುಖಂಡರನ್ನು ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು ಸಿಂಗೂರಿನ ಅಪೂರ್‍ಬಾಪುರದ ಕೊಠಡಿಯೊಂದರಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಕೂಡಿ ಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದು ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಭಟ್ಟಾಚಾರ್ಯ ಬದಲು ಬಿಜೆಪಿ ಪಕ್ಷದ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ಇಬ್ಬರು ನಾಯಕರನ್ನು ಕೂಡಿ ಹಾಕಿದ ಕಾರ್ಯಕರ್ತರು ಬಿಜೆಪಿ ಟಿಕೆಟ್ ನೀಡಿರುವ ರವೀಂದ್ರನಾಥ್ ಭಟ್ಟಾಚಾರ್ಯ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು. ಪ್ರತಿಭಟನೆ ನಡೆಸುತ್ತಿದ್ದವರಲ್ಲಿ ಅತಿ ಹೆಚ್ಚು ಮಹಿಳಾ ಕಾರ್ಯಕರ್ತರು ಇದ್ದದ್ದು ಮತ್ತೊಂದು ವಿಷೇಶವಾಗಿತ್ತು.

ರವೀಂದ್ರ ಭಟ್ಟಾಚಾರ್ಯ ಅವರನ್ನು ಬದಲಿಸಿ ಬೇರೆ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೇ, ಇಲ್ಲಿ ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ, ಭಟ್ಟಾಚಾರ್ಯರನ್ನು ಸೋಲಿಸಲಾಗುವುದು ಎಂದು ಪ್ರತಿಭಟನಾ ನಿರತ ಕಾರ್ಯಕರ್ತರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಸುಮಾರು ನಾಲ್ಕು ಗಂಟೆಗಳ ಕಾಲ ಕೊಠಡಿಯಲ್ಲಿ ಬಂಧಿಸಲ್ಪಟ್ಟಿದ್ದ ಇಬ್ಬರು ಬಿಜೆಪಿ ನಾಯಕರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೂಗ್ಲಿ (ಗ್ರಾಮೀಣ) ಪೊಲೀಸ್ ಮುಖ್ಯಸ್ಥ ಅಮಂದೀಪ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಕಳೆದ ಚುನಾವಣೆಯಲ್ಲಿ ಸಿಂಗೂರ್‌ನಿಂದ ಗೆದ್ದಿದ್ದ 89 ವರ್ಷದ ಭಟ್ಟಾಚಾರ್ಯ ಅವರು, ಈ ಬಾರಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ತೃಣಮೂಲ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆಗೊಂಡಿದ್ದರು.

2006 ರಿಂದ 2008 ರವರೆಗೆ ಸಿಂಗೂರಿನಲ್ಲಿರುವ ಟಾಟಾ ಮೋಟಾರ್ಸ್ ಪ್ಲಾಂಟ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದ ಭಟ್ಟಾಚಾರ್ಯ, ತೃಣಮೂಲ ಕಾಂಗ್ರೆಸ್ ತನ್ನ ಮಗನಿಗೆ ಟಿಕೆಟ್ ನೀಡಬೇಕೆಂದು  ಬಯಸಿದ್ದರು. ಆದರೆ ಟಿಕೆಟ್ ನಿರಾಕರಣೆ ಹಿನ್ನೆಲೆ ಅವರು ಅಸಮಾಧಾನಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಿಂಗೂರ್‌ನಿಂದ ಸಿಪಿಐ (ಎಂ) ಯುವ ವಿದ್ಯಾರ್ಥಿ ಒಕ್ಕೂಟದ ಮುಖಂಡರಾದ ಶ್ರೀಜನ್ ಭಟ್ಟಾಚಾರ್ಯ ಸ್ಫರ್ಧಿಸುತ್ತಿದ್ದಾರೆ. ಸಿಂಗೂರ್‌ನಲ್ಲಿ ಉತ್ಪಾದನಾ ಚಟುವಟಿಕೆಯನ್ನು ಮರಳಿ ತರಲು ಕೆಲಸ ಮಾಡುವುದಾಗಿ ವಿದ್ಯಾರ್ಥಿ ಮುಖಂಡ ಭಟ್ಟಾಚಾರ್ಯ ಹೇಳಿದ್ದಾರೆ.

ಸದ್ಯ ಪಶ್ಚಿಮ ಬಂಗಾಳದಾದ್ಯಂತ, ಈ ಘಟನೆಯಿಂದ ಮೂಲ ಬಿಜೆಪಿಗರು ಮತ್ತು ಹೊಸಬರ ನಡುವಿನ ಬಿರುಕು ಬಹಿರಂಗವಾಗಿ ಹೊರಬಂದಿದೆ. ಈಗಾಗಲೇ ಪಕ್ಷದ ಹಲವಾರು ಸದಸ್ಯರು ಚುನಾವಣಾ ಟಿಕೆಟ್ ನಿರಾಕರಿಸಿದ್ದಕ್ಕಾಗಿ  ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...