Homeಕರ್ನಾಟಕಬೆಳಂಬೆಳಿಗ್ಗೆಯೇ ತುಮಕೂರನ್ನು ಬೆಚ್ಚಿ ಬೀಳಿಸಿದ ಎರಡು ಪ್ರತ್ಯೇಕ ಕೊಲೆಗಳು...

ಬೆಳಂಬೆಳಿಗ್ಗೆಯೇ ತುಮಕೂರನ್ನು ಬೆಚ್ಚಿ ಬೀಳಿಸಿದ ಎರಡು ಪ್ರತ್ಯೇಕ ಕೊಲೆಗಳು…

- Advertisement -
- Advertisement -

ತುಮಕೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ಕೊಲೆಗಳಾಗಿದ್ದು ತುಮಕೂರನ್ನು ಬೆಚ್ಚಿಬೀಳಿಸಿದೆ.

ಸ್ನೇಹಿತನೇ ರೌಡಿಶೀಟರ್‌ನನ್ನು ಹತ್ಯೆ ಮಾಡಿರುವ ಘಟನೆ ತುಮಕೂರು ವಲಯದ ಬೆಳಗುಂಬದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮೋಹನ್ ಕುಮಾರ್ ಅಲಿಯಾಸ್ ಚೊಟ್ಟ ಕುಮಾರ್ ಎಂದು ಗುರುತಿಸಲಾಗಿದೆ.

ಕೊಲೆಯಾದ ಮೋಹನ್‌ ಕುಮಾರ್‌

ಹತ್ಯೆಯಾದ ವ್ಯಕ್ತಿ ಮೋಹನ್ ಕುಮಾರ್ ತುಮಕೂರಿನ ವಿಜಯನಗರ ವಾಸಿ. ಪೊಲೀಸ್ ದಾಖಲೆಗಳಲ್ಲಿ ಈತ ರೌಡಿಶೀಟರ್. ಮೋಹನ್ ಕುಮಾರ್ ಮೂರು ಕೊಲೆ ಪ್ರಕರಣ, ಕಳವು ಮತ್ತು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ. ಶುಕ್ರವಾರ ರಾತ್ರಿ ಮೋಹನ್ ಕುಮಾರ್ ಊರ್ಡಿಗೆರೆಗೆ ಹೊರಟಿದ್ದ. ಮಾರ್ಗದ ನಡುವೆ ಬೆಳಗುಂಬದಲ್ಲಿ ಸ್ನೇಹಿತ ಸಿಕ್ಕಿದನೆಂದು ನಿಂತು ಮಾತನಾಡಿದ್ದಾನೆ. ಮಾತನಾಡುತ್ತ ನಿಂತಿದ್ದ ಇಬ್ಬರ ನಡುವೆ ಮಾತಿಗೆ ಮಾತು ನಡೆದು ಅತಿರೇಕಕ್ಕೆ ಹೋಗಿದೆ.

ಬೆಳಗುಂಬ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ನಡೆದ ಘಟನೆಯಲ್ಲಿ ಸಿಟ್ಟಿಗೆದ್ದ ಸ್ನೇಹಿತ ಟೆಂಪರ್ ರಾಜ ರಸ್ತೆಯ ಬದಿಯ ಸೈಜುಕಲ್ಲನ್ನು ಎತ್ತಿ ರೌಡಿಶೀಟರ್ ಮೋಹನ್ ಕುಮಾರ್ ತಲೆ ಮೇಲೆ ಹಾಕಿದ್ದಾನೆ. ತಲೆ ಜಜ್ಜಿ ಹೋಗಿದೆ. ಮುಖದ ಒಂದು ಭಾಗ ಸೀಳಿ ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಹತ್ಯೆ ಮಾಡಿರುವ ವ್ಯಕ್ತಿ ರಾಜು ಟೆಂಪರ್ ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಮೋಹನ್ ಕುಮಾರ್ ಗೆ 4 ತಿಂಗಳ ಗಂಡುಮಗು, ಮಗಳು ಮತ್ತು ಪತ್ನಿ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಹನ್ ಕುಮಾರ್ ಮೂರು ಕೊಲೆ ಪ್ರಕರಣ, ಕಳವು ಮತ್ತು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದು ಪ್ರಕರಣ ದಾಖಲಾಗಿದೆ.

ಮಹಿಳೆ ಹತ್ಯೆ

ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಶುಕ್ರವಾರ ಮಧ್ಯಾಹ್ನ 3.30ರಲ್ಲಿ ದೊಡ್ಡಸಿದ್ದಯ್ಯನಪಾಳ್ಯದಲ್ಲಿ  ಘಟನೆ ನಡೆದಿದೆ.

ಕೊಲೆಯಾದ ಮಹಿಳೆಯನ್ನು 35 ವರ್ಷದ ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ದಾರಿಯ ನಡುವೆ ಹಳ್ಳ ಇಳಿಯುತ್ತಿದ್ದ ಭಾಗ್ಯಮ್ಮ ಕೊರಳಿಗೆ ಚಾಕು ಹಾಕಿ ಮಾಂಗಲ್ಯ ಸರ ಅಪಹರಿಸಲು ದುಷ್ಕರ್ಮಿ ಯತ್ನಿಸಿದ್ದಾನೆ.

ಆಗ ಹರಿತವಾದ ಚಾಕು ಭಾಗ್ಯಮ್ಮಳ ಕತ್ತು ಸೀಳಿ ಹೋಗುವಂತೆ ಮಾಡಿದೆ. ಹಳ್ಳ ದಾಟಿ ಸ್ವಲ್ಪ ದೂರ ಬರುವಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...