Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾ ಧ್ವಂಸ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದ ಬಳಿಕ ಬನ್‌ಭೂಲ್‌ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಿಂದ ದಿನದೂಡುತ್ತಿದ್ದಾರೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ. ಪೋಲಿಸರ ಬಗ್ಗೆ ಭಯದಿಂದ ಜನರು ತಮ್ಮ ಮನೆಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಅನಾಸ್ ಅವರ ಸಹೋದರ ಮೊಹಮ್ಮದ್ ಅಮನ್ ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ.  ಹಿಂಸಾಚಾರಕ್ಕೆ ಮೊದಲು ನಾನು ಮತ್ತು ತಂದೆ ಝಾಹಿದ್ ಹುಸೇನ್ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದೆವು. ಬಳಿಕ ನಾನು ಮನೆಗೆ ಮರಳಿದೆ. ಆದರೆ ತಂದೆ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಹಿಂಸಾಚಾರದ ಸುದ್ದಿ ಗೊತ್ತಾದಾಗ ಹೊರಗಿದ್ದ ಅನಸ್‌ಗೆ ಕರೆಮಾಡಿ ಮನೆಗೆ ಮರಳುವಂತೆ ಸೂಚಿಸಿದ್ದೆ. ನನ್ನ ಸ್ನೇಹಿತೆಯೋರ್ವಳು ಮಾರುಕಟ್ಟೆಯಲ್ಲಿರುವ ಮಾಹಿತಿ ತಿಳಿದು ಆಕೆಯನ್ನು ಹುಡುಕಲು ಹೋಗಿದ್ದೆ. ಬಳಿಕ ನನ್ನ ತಂದೆ ಮನೆಗೆ ಮರಳಿದ್ದರು. ಆದರೆ ಅನಾಸ್ ಇನ್ನೂ ಬಂದಿಲ್ಲ ಎಂದು ತಂದೆ ಆತನನ್ನು ಹುಡಕಲು ಹೋಗಿದ್ದಾರೆ. ನನ್ನ ತಂದೆ ಡೇರಿಯೊಂದರ ಬಳಿ ನಿಂತಿದ್ದಾಗ ಅವರ ಎದೆಗೆ ಗುಂಡು ಬಡಿದಿತ್ತು. ನೆರೆಯಾತ ನೀಡಿದ ಮಾಹಿತಿಯಂತೆ ನಾನು ಅಲ್ಲಿಗೆ ತೆರಳಿದಾಗ ತಂದೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಇತರ ಇಬ್ಬರ ನೆರವಿನಿಂದ ಅವರನ್ನು ಸ್ಥಳೀಯ ಕ್ಲಿನಿಕ್ ಗೆ ಸಾಗಿಸಿದ್ದೆ. ನೋಡಿದರೆ ಅನಾಸ್ ಸೊಂಟದ ಕೆಳಗೆ ಗುಂಡೇಟಿನಿಂದ ಗಾಯಗೊಂಡು ಅದಾಗಲೇ ಅಲ್ಲಿದ್ದ. ಇಬ್ಬರನ್ನೂ ಬೇರೆ ಕಡೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಅದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ, ಇದರಿಂದ ಕೆಲವೇ ಕ್ಷಣದಲ್ಲಿ ತಂದೆ ಮತ್ತು ಸಹೋದರ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಇಬ್ಬರ ಸಾವಿನ ಬಳಿಕ ಶುಕ್ರವಾರ ರಾತ್ರಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ದಫನ ಕಾರ್ಯ ಮಾಡಿದ್ದೇವೆ, ಈ ವೇಳೆ ನಮ್ಮ ಕುಟುಂಬದ ಕೇವಲ ಐವರಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು ಎಂದು ಅಮನ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಮೃತ ಫಹೀಮ್ ಖುರೇಷಿಯ ಸೋದರ ಸಂಬಂಧಿ ಜಾವೇದ್,  ಫಹೀಮ್ ಖುರೇಷಿಯನ್ನು ನೆರೆಹೊರೆಯವರೇ ಗುಂಡಿಕ್ಕಿ ಕೊಂದಿದ್ದಾರೆ. ಅವರು ಮನೆಯಲ್ಲಿದ್ದಾಗ ರಾತ್ರಿ 7.30ರ ಸುಮಾರಿಗೆ ಯಾರೋ ತಮ್ಮ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದರು. ಅದಕ್ಕೆ ಅವರು ವಿರೋಧಿಸಿದಾಗ ಅವರ ಮೆಲೆ ಗುಂಡಿನ ದಾಳಿ ನಡೆಸಲಾಗಿದೆ. ಬಳಿಕ ಫಹೀಮ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಫಹೀಂ ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಬನ್‌ಭೂಲ್‌ಪುರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿರುವ ಗೌಹರ್, ಹಿಂಸಾಚಾರದ ಸಮಯದಲ್ಲಿ ತನ್ನ ಮಗ ಆರಿಸ್ (18) ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕುಟುಂಬವು ಅವನನ್ನು ಬರೇಲಿಯ ಆಸ್ಪತ್ರೆಗೆ ಕರೆದೊಯ್ದಿದ್ದರಿಂದ ಜಿಲ್ಲಾಡಳಿತ ಹಿಂಸಾಚಾರದಲ್ಲಿ ಮೃತರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಮಗ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ಹಿಂಸಾಚಾರ ಪ್ರಾರಂಭವಾದಾಗ ನಾನು ಸಂಜೆ 5.45ರ ಸುಮಾರಿಗೆ ಅವರಿಗೆ ಕರೆ ಮಾಡಿ ಹಿಂತಿರುಗುವಂತೆ ಹೇಳಿದೆ. ಆದರೆ ಅವನು ಬಂದಿರಲಿಲ್ಲ, ಮತ್ತೆ 6.30ಕ್ಕೆ ಕರೆ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ. ನಾನು ಅವನನ್ನು ಹುಡುಕಲು ನಿರ್ಧರಿಸಿದೆ, ಹುಡುಕುತ್ತಿರುವಾಗ, ನನ್ನ ಮಗ ಚೌರಾಹಾದಲ್ಲಿ ಬಿದ್ದುಕೊಂಡಿದ್ದಾನೆ ಎಂದು ಯಾರೋ ಹೇಳಿದ್ದರು. ಇನ್ನಿಬ್ಬರ ಸಹಾಯದಿಂದ ನಾನು ಅವನನ್ನು ಮನೆಗೆ ಕರೆತಂದೆವು. ಹಿಂಸಾಚಾರದ ಹಿನ್ನೆಲೆ ಅವರನ್ನು ಬರೇಲಿಗೆ ಕರೆದೊಯ್ಯುತ್ತಿರುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಅವನು ನನ್ನ ಹಿರಿಯ ಮಗ, ನನ್ನ ಇಡೀ ಜಗತ್ತು ಆತ ಆಗಿದ್ದ ಎಂದು ಗೌಹರ್ ಹೇಳಿದ್ದಾರೆ.

ಏನಿದು ಘಟನೆ?

ಉತ್ತರಖಂಡದ ಹಲ್ದ್ವಾನಿ ಪುರಸಭೆಯು, ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು   ಕೆಡವಿದೆ. ಈ ಕುರಿತ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ ಮಸೀದಿಯನ್ನು ತುರ್ತಾಗಿ ಕೆಡವಲಾಗಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿತ್ತು. ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...