ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಕರ್ಫ್ಯೂ ಉಲ್ಲಂಘಿಸಿದ ನೆಪದಲ್ಲಿ ಯುವಕನ ಮೇಲೆ ಹಲ್ಲೆ ಮಾಡಿ, ಯುವಕನ ಸಾವಿನಲ್ಲಿ ಭಾಗಿಯಾಗಿದ್ದಕ್ಕಾಗಿ ಕೆಲಸದಿಂದ ವಜಾಗೊಂಡಿದ್ದ ಹೋಂ ಗಾರ್ಡ್‌ನನ್ನು ಭಾನುವಾರ ಬಂಧಿಸಲಾಗಿದೆ.
ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
“ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಗಳನ್ನು ಬಂಧಿಸಿದ್ದೇವೆ. ಇತರ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಅವರನ್ನು ಪತ್ತೆ ಹಚ್ಚಲು ನಾವು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದೇವೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ
थाना बांगरमऊ पर पंजीकृत हत्या के अभियोग में की गई कार्यवाही के संदर्भ में पुलिस अधीक्षक उन्नाव द्वारा दी गई बाइट @Uppolice pic.twitter.com/aTuxBCBBGU
— UNNAO POLICE (@unnaopolice) May 23, 2021
ಕೊರೊನಾ ಕಾರಣದಿಂದ ವಿಧಿಸಲಾಗಿರುವ ಕರ್ಫ್ಯೂ ಉಲ್ಲಂಘಿಸಿದ ಕಾರಣಕ್ಕಾಗಿ ಹಲ್ಲೆ ನಡೆಸಿ, ಪೊಲೀಸ್ ಠಾಣೆಗೆ ಕರೆತಂದು ಕಸ್ಟಡಿಯಲ್ಲಿ ಮತ್ತೆ ಹೊಡೆದ ಕಾರಣದಿಂದಾಗಿ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಆರೋಪಿ ಹೋಂ ಗಾರ್ಡ್ ಸತ್ಯಪ್ರಕಾಶ್‌ನನ್ನು ಸೇವೆಯಿಂದ ವಜಾಗೊಳಿಸಿ, ಬಂಧಿಸಲಾಗಿದೆ. ನಾಪತ್ತೆಯಾಗಿರುವ ಕಾನ್‌ಸ್ಟೆಬಲ್‌ಗಳಾದ ವಿಜಯ್ ಚೌಧುರಿ ಮತ್ತು ಸಿಮಾವತ್ ಅವರನ್ನು ಹುಡುಕಲಾಗುತ್ತಿದೆ.
ಉನ್ನಾವೊದ ಬನ್ಗಾರ್ಮೌ ಪಟ್ಟಣದಲ್ಲಿ ಶುಕ್ರವಾರ 17 ವರ್ಷದ ಯುವಕ ತನ್ನ ಮನೆಯ ಹೊರಗೆ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯುವಕನನ್ನು ಪೊಲೀಸರು ಎತ್ತಿಕೊಂಡು, ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ಕೆಟ್ಟದಾಗಿ ಹಲ್ಲೆ ನಡೆಸಿದ್ದರು. ನಂತರ ಆತನ ಸ್ಥಿತಿ ಹದಗೆಟ್ಟಿತು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.
ಪೊಲೀಸರ ಈ ಕ್ರಮವು ಸ್ಥಳೀಯರ ಪ್ರತಿಭಟನೆಗೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಸರ್ಕಾರಿ ಕೆಲಸ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳ ಆಶ್ವಾಸನೆ ಬಳಿಕ ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು:ಕೇಜ್ರಿವಾಲ್


