Homeಮುಖಪುಟಕರ್ಫ್ಯೂ ಉಲ್ಲಂಘನೆ ನೆಪದಲ್ಲಿ ಯುವಕನ ಕೊಲೆ ಆರೋಪ: ಒಬ್ಬರ ಬಂಧನ, ಇಬ್ಬರು ಪೊಲೀಸರು ನಾಪತ್ತೆ

ಕರ್ಫ್ಯೂ ಉಲ್ಲಂಘನೆ ನೆಪದಲ್ಲಿ ಯುವಕನ ಕೊಲೆ ಆರೋಪ: ಒಬ್ಬರ ಬಂಧನ, ಇಬ್ಬರು ಪೊಲೀಸರು ನಾಪತ್ತೆ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಕರ್ಫ್ಯೂ ಉಲ್ಲಂಘಿಸಿದ ನೆಪದಲ್ಲಿ ಯುವಕನ ಮೇಲೆ ಹಲ್ಲೆ ಮಾಡಿ, ಯುವಕನ ಸಾವಿನಲ್ಲಿ ಭಾಗಿಯಾಗಿದ್ದಕ್ಕಾಗಿ ಕೆಲಸದಿಂದ ವಜಾಗೊಂಡಿದ್ದ ಹೋಂ ಗಾರ್ಡ್‌ನನ್ನು ಭಾನುವಾರ ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

“ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಗಳನ್ನು ಬಂಧಿಸಿದ್ದೇವೆ. ಇತರ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಅವರನ್ನು ಪತ್ತೆ ಹಚ್ಚಲು ನಾವು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದೇವೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ಕೊರೊನಾ ಕಾರಣದಿಂದ ವಿಧಿಸಲಾಗಿರುವ ಕರ್ಫ್ಯೂ ಉಲ್ಲಂಘಿಸಿದ ಕಾರಣಕ್ಕಾಗಿ ಹಲ್ಲೆ ನಡೆಸಿ, ಪೊಲೀಸ್ ಠಾಣೆಗೆ ಕರೆತಂದು ಕಸ್ಟಡಿಯಲ್ಲಿ ಮತ್ತೆ ಹೊಡೆದ ಕಾರಣದಿಂದಾಗಿ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಆರೋಪಿ ಹೋಂ ಗಾರ್ಡ್ ಸತ್ಯಪ್ರಕಾಶ್‌ನನ್ನು ಸೇವೆಯಿಂದ ವಜಾಗೊಳಿಸಿ, ಬಂಧಿಸಲಾಗಿದೆ. ನಾಪತ್ತೆಯಾಗಿರುವ ಕಾನ್‌ಸ್ಟೆಬಲ್‌ಗಳಾದ ವಿಜಯ್ ಚೌಧುರಿ ಮತ್ತು ಸಿಮಾವತ್ ಅವರನ್ನು ಹುಡುಕಲಾಗುತ್ತಿದೆ.

ಉನ್ನಾವೊದ ಬನ್ಗಾರ್ಮೌ ಪಟ್ಟಣದಲ್ಲಿ ಶುಕ್ರವಾರ 17 ವರ್ಷದ ಯುವಕ ತನ್ನ ಮನೆಯ ಹೊರಗೆ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯುವಕನನ್ನು ಪೊಲೀಸರು ಎತ್ತಿಕೊಂಡು, ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ಕೆಟ್ಟದಾಗಿ ಹಲ್ಲೆ ನಡೆಸಿದ್ದರು. ನಂತರ ಆತನ ಸ್ಥಿತಿ ಹದಗೆಟ್ಟಿತು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಪೊಲೀಸರ ಈ ಕ್ರಮವು ಸ್ಥಳೀಯರ ಪ್ರತಿಭಟನೆಗೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಸರ್ಕಾರಿ ಕೆಲಸ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳ ಆಶ್ವಾಸನೆ ಬಳಿಕ ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಪ್ಪಿಸಲಾಗಿದೆ.


ಇದನ್ನೂ ಓದಿ: ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು:ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...