Homeಚಳವಳಿಯಡಿಯೂರಪ್ಪನವರ ಅಧಿಕಾರ ದಾಹಕ್ಕೆ ಇಬ್ಬರು ಅಮಾಯಕ ಹೋರಾಟಗಾರು ಬಲಿ: ಎಚ್‌.ಡಿ ಕುಮಾರಸ್ವಾಮಿ

ಯಡಿಯೂರಪ್ಪನವರ ಅಧಿಕಾರ ದಾಹಕ್ಕೆ ಇಬ್ಬರು ಅಮಾಯಕ ಹೋರಾಟಗಾರು ಬಲಿ: ಎಚ್‌.ಡಿ ಕುಮಾರಸ್ವಾಮಿ

ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನರ್ಹ ಅಧಿಕಾರ'ದ ಮದ ಮರೆಸಿದಂತಿದೆ

- Advertisement -
- Advertisement -

“ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ” ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೊರಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದರೆ.

ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು ‘ಅನರ್ಹ ಅಧಿಕಾರ’ದ ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಬಿಎಸ್ವೈ ಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಬಿಎಸ್ವೈ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಧಿಕಾರದ ಅಮಲಿನಲ್ಲಿರುವವರ ದಾಹ, ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಲ್ಲಾಳಿಗಳಾಗುತ್ತಾರೆ. ಇಂಥವರೇ ತುಂಬಿರುವ ಜನ ವಿರೋಧಿ ಪ್ರಭುತ್ವ ಅಂತ್ಯ ಕಾಲ ಸಮೀಪಿಸಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...