Homeರಾಷ್ಟ್ರೀಯಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

ಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರಾರಂಭಿಸಿದ ಐತಿಹಾಸಿಕ ಹೋರಾಟಕ್ಕೆ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ರೈತ ಸಂಘಗಳು ಶನಿವಾರ ದೇಶಾದ್ಯಂತ ರಾಜಭವನಗಳಿಗೆ ಮೆರವಣಿಗೆಗಳನ್ನು ನಡೆಸಲಿವೆ. ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಸಿದ ಸುಮಾರು ಒಂದು ವರ್ಷದ ದೀರ್ಘ ಹೋರಾಟದ ನಂತರ ಬಿಜೆಪಿ ಸರ್ಕಾರ ರೈತರ ಮುಂದೆ ಮಂಡಿಯೂರಿ ಸೋಲೊಪ್ಪಿಕೊಂಡಿತ್ತು.

ಸರ್ಕಾರ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸದ ಕಾರಣ ಅದರ ವಿರುದ್ಧ ಕೂಡಾ ರೈತರ ಪ್ರತಿಭಟನೆಯಲ್ಲಿ ದಾಖಲಿಸಲಾಗುವುದು ಎಂದು ರೈತ ಮುಖಂಡರು ಶುಕ್ರವಾರ ಹೇಳಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಚರ್ಚೆ ನಡೆಸಿ ಕಾನೂನು ತರುವುದಾಗಿ ಸರಕಾರ ಲಿಖಿತವಾಗಿ ಹೇಳಿಕೊಂಡಿದ್ದರೂ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ರೈತ ಮುಖಂಡರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೇಶದಾದ್ಯಂತದ ಲಕ್ಷಾಂತರ ರೈತರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

“ನಮ್ಮ ಹಲವು ಬೇಡಿಕೆಗಳಿಗೆ ಲಿಖಿತವಾಗಿ ಒಪ್ಪಿಗೆ ನೀಡಿದರೂ ಏನೂ ಆಗಿಲ್ಲ. ಇದು ದೇಶದ ರೈತರಿಗೆ ಮೋಸ ಮಾಡಿದ ದೇಶದ್ರೋಹಿ ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರವು ಕಾರ್ಪೊರೇಟ್‌ಗಳನ್ನು ರಕ್ಷಿಸುತ್ತಿದೆ… ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶವೇ ಇಲ್ಲ ಎಂದು ಸಾಬೀತುಪಡಿಸಿದ್ದಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಹನ್ನನ್ ಮೊಲ್ಲಾ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹನ್ನನ್ ಮೊಲ್ಲಾ ಅವರು ಲಕ್ನೋದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ರೈತ ಸಂಘಗಳ ಸಂಘಟನೆಯಾದ ಎಸ್‌ಕೆಎಂ ಕೂಡ ಡಿಸೆಂಬರ್ 8 ರಂದು ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲು ಸಭೆಯನ್ನು ಕರೆದಿದೆ.

“ಜನರ ಮಾತು ಕೇಳಲು ಸರ್ಕಾರ ಸಿದ್ಧವಿಲ್ಲದಿರುವುದನ್ನು ನಾವು ನೋಡಿದ್ದೇವೆ. ನಾವು ಮತ್ತೊಂದು ಚಳುವಳಿಯನ್ನು ಪ್ರಾರಂಭಿಸಿದ್ದೇವೆ. ಹೀಗಾಗಿ ನಾವು ದೇಶಾದ್ಯಂತ ರ್‍ಯಾಲಿಗಳನ್ನು ನಡೆಸುತ್ತೇವೆ. ಈ ಬಾರಿ ನಮ್ಮ ಚಳುವಳಿ ದೆಹಲಿಗೆ ಸೀಮಿತವಾಗಿ ಇರುವುದಿಲ್ಲ, ಇಡೀ ದೇಶಕ್ಕೆ ಸೀಮಿತವಾಗಿದೆ. ಆಯಾ ರಾಜ್ಯಗಳ ರಾಜಭವನ ಮತ್ತು ರಾಜ್ಯಪಾಲರ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿ ರೈತರು ಪಾದಯಾತ್ರೆ ನಡೆಸಲಿದ್ದಾರೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಚಳವಳಿಗಾರರು ಚುನಾವಣೆ ಗೆಲ್ಲಬೇಕಾದರೆ…

ಎಂಎಸ್‌ಪಿ ಕುರಿತು ಸಮಿತಿಯನ್ನು ಸರಿಯಾಗಿ ರಚಿಸಲಾಗಿಲ್ಲ ಹಾಗೂ ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ “ಸುಳ್ಳು” ಪ್ರಕರಣಗಳನ್ನು ಹಿಂಪಡೆಯಲಾಗಿಲ್ಲ ಎಂದು ರೈತ ಸಂಘ ಹೇಳಿಕೊಂಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ಮೋದಿ, ಎಂಎಸ್‌ಪಿ ಮೇಲಿನ ಕಾನೂನು ಖಾತರಿಗಾಗಿ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

“ಎಂಎಸ್‌ಪಿ ಕುರಿತ ಸರ್ಕಾರದ ಸಮಿತಿಯನ್ನು ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಮೋದಿ ಸರ್ಕಾರ ರದ್ದು ಮಾಡಿದ ಕೃಷಿ ಕಾನೂನುಗಳನ್ನು ಬೆಂಬಲಿಸಿದ ‘ತಥಾಕಥಿತ ರೈತ ನಾಯಕರು’ ಅದರ ಸದಸ್ಯರಾಗಿದ್ದಾರೆ. ರೈತರ ಕಾನೂನು ಹಕ್ಕುಗಳನ್ನು ಖಾತರಿಪಡಿಸುವ ಬಗ್ಗೆ ಮಾತನಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಈ ಮಧ್ಯೆ, ಎಸ್‌ಕೆಎಂ ಸದಸ್ಯ ಅಭಿಮನ್ಯು ಸಿಂಗ್ ಕೊಹರ್ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ, ಹೀಗಾಗಿ ಇನ್ನೊಂದು ಚಳವಳಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...