HomeUncategorized20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

- Advertisement -
- Advertisement -

ಕಳೆದ 20 ವರ್ಷಗಳಲ್ಲಿ ರಾಜ್ಯದ ವಿವಿಧ ಯೋಜನೆಗಳಿಗಾಗಿ ಅರಣ್ಯ ಇಲಾಖೆಯು ತನ್ನ ಅಡಿಯಲ್ಲಿ ಇದ್ದ ಸುಮಾರು 20,805.72 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗಾಗಿ ನೀಡಿದೆ ಎಂದು ವರದಿಯೊಂದು ಹೇಳಿದೆ. ಇದರಲ್ಲಿ ಗಣಿ, ನೀರಾವರಿ ಹಾಗೂ ಮೊಬೈಲ್ ಟವರ್ ಸ್ಥಾಪನೆಯ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 20 ವರ್ಷಗಳಲ್ಲಿ ಬೇರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2004-05 ರಿಂದ 2023-24 ರವರೆಗೆ ಅರಣ್ಯ ಸಂರಕ್ಷಣಾ ಕಾಯ್ದೆ (1980) ಅಡಿಯಲ್ಲಿ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಿದ ಮಾಹಿತಿಯ ಪ್ರಕಾರ, ವಿವಿಧ ಯೋಜನೆಗಳಿಗೆ ಭೂಮಿಗೆ ಮಂಜೂರಾತಿ ಕೋರಿ 534 ಪ್ರಸ್ತಾವನೆಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಗಣಿಗಾರಿಕೆ ಮತ್ತು ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಿಗೆ ದೊಡ್ಡ ಮತ್ತು ಸಣ್ಣ ಜಮೀನುಗಳನ್ನು ನೀಡಲಾಯಿತು ಎಂದು ವರದಿ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04ಹೆಕ್ಟೇರ್ ಮತ್ತು 232.76ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55ಹೆಕ್ಟೇರ್, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 0.78ಹೆಕ್ಟೇರ್ ರಸ್ತೆ ಯೋಜನೆಗಳಿಗೆ ಮತ್ತು 0.4ಹೆಕ್ಟೇರ್ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅರಣ್ಯ ಭೂಮಿಯನ್ನು ನೀಡಿಲಾಗಿದೆ.

ಸೆಲ್ ಫೋನ್ ನೆಟ್‌ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಕೂಡಾ ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ, ಕೇಂದ್ರ ಸರ್ಕಾರದ ಇಂಟರ್ನೆಟ್ ಮತ್ತು ಮೊಬೈಲ್ ಸಂಪರ್ಕವನ್ನು ಹೆಚ್ಚಿಸುವ ಯೋಜನೆಯಡಿ 256 BSNL ಟವರ್‌ಗಳನ್ನು ಸ್ಥಾಪಿಸಲು ಭೂಮಿಯನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಪಶ್ಚಿಮ ಘಟ್ಟಗಳ ಇತರ ಸ್ಥಳಗಳಲ್ಲಿ ನೀಡಲಾಗಿದೆ.

ಎತ್ತಿನಹೊಳೆ ಯೋಜನೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ನೀಡುವ ಬಗ್ಗೆ ಪಟ್ಟಿಯಲ್ಲಿ ಇದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಕೂಡಾ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ನಿಯಮಗಳ ಪ್ರಕಾರ, 2023 ರಲ್ಲಿ ತಿದ್ದುಪಡಿಯಾದ ಅರಣ್ಯ ಸಂರಕ್ಷಣಾ ಕಾಯಿದೆ, 1980 ರ ಅಡಿಯಲ್ಲಿ ಭೂಮಿಯನ್ನು ನೀಡಲಾಗಿದೆ. ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಅಗತ್ಯವಿದ್ದರೆ, ಪ್ರತಿ ಹೆಕ್ಟೇರ್‌ಗೆ ಸಮಾನ ಆಯಾಮದ ಭೂಮಿಯನ್ನು ಅರಣ್ಯೀಕರಣಕ್ಕಾಗಿ ಇಲಾಖೆಗೆ ಹಸ್ತಾಂತರಿಸಬೇಕಾಗಿದೆ. ಜೊತೆಗೆ ಅರಣ್ಯೀಕರಣಕ್ಕೆ ಪರಿಹಾರ ನೀಡಬೇಕಿದೆ.

ಅಷ್ಟೆ ಅಲ್ಲದೆ, ಅರ್ಜಿದಾರರು ಮರಗಳನ್ನು ಕಡಿಯುವ ವೆಚ್ಚವನ್ನು ಸಹ ಭರಿಸಬೇಕು ಮತ್ತು ಅವುಗಳ ಪ್ರಸ್ತುತ ಮೌಲ್ಯವನ್ನು ಪಾವತಿಸಬೇಕು ಎಂದು ನಿಯಮ ಹೇಳುತ್ತದೆ. ವನ್ಯಜೀವಿಗಳ ಉಪಶಮನಕ್ಕಾಗಿ ಯೋಜನಾ ವೆಚ್ಚದ 2% ಮತ್ತು ಮಣ್ಣು ತಗ್ಗಿಸುವ ಕ್ರಮಗಳಿಗಾಗಿ 0.5% ಕೂಡಾ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ.

ಅರಣ್ಯದ ಬಳಿ ಪರಿಹಾರವಾಗಿ ಭೂಮಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಹಲವು ಪ್ರಕರಣಗಳಲ್ಲಿ ಅರಣ್ಯದಿಂದ ದೂರವಿರುವ ಸ್ಥಳಗಳಲ್ಲಿ ಭೂಮಿ ನೀಡಲಾಗಿದೆ. ಇಲಾಖೆಗೆ ನೀಡಿರುವ ಕೆಲವು ಜಮೀನುಗಳು ವ್ಯಾಜ್ಯ ಅಥವಾ ಅತಿಕ್ರಮಣಕ್ಕೆ ಒಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ತನ್ನ ತಂಗಿಗೆ ಕಿರುಕುಳ ಕೊಡುತ್ತಿದ್ದ ಆರೋಪ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...