Homeಮುಖಪುಟ200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

- Advertisement -
- Advertisement -

ಕಾನ್ ಕಲಾವಿದರಾದ (con artists) ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ವಿರುದ್ಧದ 200 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಫೋರ್ಟಿಸ್ ಹೆಲ್ತ್‌ಕೇರ್ ( Fortis Healthcare) ಪ್ರಮೋಟರ್‍ಸ್ ಶಿವಿಂದರ್ ಸಿಂಗ್ ಅವರ ಕುಟುಂಬವನ್ನು ಸುಮಾರು 200 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಚಂದ್ರಶೇಖರ್ ಮತ್ತು ಪಾಲ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ಅವರ ಮೇಲೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸುಲಿಗೆ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಇದಾದ ಬಳಿಕ ಬಾಲಿವುಡ್ ನಟಿ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯ  ಸಮನ್ಸ್ ನೀಡಿದೆ. ಆರೋಪಿಗಳ ಜೊತೆಗಿನ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಫತೇಹಿಗೆ ಫತೇಹಿ ಅವರಿಗೆ ಸಮನ್ಸ್ ನೀಡಿಲಾಗಿದೆ ಎಂದು ಏಜೆನ್ಸಿ ಮೂಲಗಳು ಹೇಳಿವೆ.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

 

ಶಿವಿಂದರ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರ ದೂರಿನ ಆಧಾರದ ಮೇಲೆ 200 ಕೋಟಿ ರೂಪಾಯಿ ವಂಚನೆ ಪ್ರಕರಣ ದಾಖಲಾಗಿದೆ.

ಘಟನೆಯ ಸಮಯದಲ್ಲಿ, 21 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಚಂದ್ರಶೇಖರ್ ದೆಹಲಿಯ ರೋಹಿಣಿ ಜೈಲಿನಲ್ಲಿ ಬಂಧಿಯಾಗಿದ್ದರು. ಬಂಧನದ ಬಳಿಕವೂ ಜೈಲಿನಿಂದ ಸುಲಿಗೆ ದಂಧೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಚಂದ್ರಶೇಖರ್ ಬಂಧನವನ್ನು 11 ದಿನಗಳು ಮತ್ತು ಲೀನಾ ಪೌಲ್ ಅವರ ಬಂಧನವನ್ನು 16 ದಿನಗಳವರೆಗೆ ವಿಸ್ತರಿಸಲಾಗಿದೆ.

“ಸುಕೇಶ್ ಚಂದ್ರಶೇಖರ್ ಈ ವಂಚನೆಯ ಸೂತ್ರಧಾರ. ಅವರು 17 ನೇ ವಯಸ್ಸಿನಿಂದಲೂ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಸ್ತುತ ಅವರನ್ನು ರೋಹಿಣಿ ಜೈಲಿನಲ್ಲಿ ಇರಿಸಲಾಗಿದೆ” ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಆಗಸ್ಟ್ 24 ರಂದು, ತನಿಖಾ ಸಂಸ್ಥೆ ಚಂದ್ರಶೇಖರ್ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಬಂಗಲೆಯಿಂದ 82.5 ಲಕ್ಷ ನಗದು ಮತ್ತು ಒಂದು ಡಜನ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಾಕ್ಷಿಯಾಗಿ 36 ವರ್ಷದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆಗಸ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...