Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...