ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ವೈದ್ಯರ ಹುದ್ದೆಗಳು ಭರ್ತಿಯಾಗದೆ ಹಾಗೆ ಬಿದ್ದಿವೆ ಎಂದು TNIE ವರದಿ ಶನಿವಾರ ಹೇಳಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ತೀವ್ರ ಬಿಕ್ಕಟ್ಟಿಗೆ ಸಿಲುಕಿವೆ ಎಂದು ವರದಿ ಉಲ್ಲೇಖಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ವಿಶೇಷ ವೈದ್ಯಕೀಯ ಅಧಿಕಾರಿಗಳು ಮತ್ತು ಇತರರು ಸೇರಿದಂತೆ 744 ತಜ್ಞರು, 613 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು ಮತ್ತು 558 ವೈದ್ಯಕೀಯ ವೃತ್ತಿಪರರ ಕೊರತೆಯಿದೆ ಎಂದು ಜೂನ್‌ವರೆಗಿನ ಅಂಕಿ ಅಂಶಗಳು ಸೂಚಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ದಂತ ವೈದ್ಯಕೀಯ ವಿಭಾಗದಲ್ಲಿಯೂ ಒಟ್ಟು 425 ಮಂಜೂರಾದ ಹುದ್ದೆಗಳಲ್ಲಿ 25 ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದೆ.
ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿರುವುದಾಗಿ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಹೇಳಿದ್ದಾಗಿ ವರದಿ ತಿಳಿಸಿದೆ. “ಆದರೆ, ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ನೀತಿಗಳನ್ನು ವ್ಯಾಖ್ಯಾನಿಸುವ ಸ್ಪಷ್ಟ ನೀತಿಗಳ ಕೊರತೆ ಇದಕ್ಕೆ ಸಹಾಯ ಮಾಡುತ್ತಿಲ್ಲ” ಅವರು ವಿಷಾದಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಗಳು ನಡೆಯುತ್ತಿದ್ದರೂ, ಸಾರ್ವಜನಿಕ ವಲಯಕ್ಕೆ ಅಭ್ಯರ್ಥಿಗಳನ್ನು ಆಕರ್ಷಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಸಾಮಾನ್ಯವಾಗಿ ಆರೋಗ್ಯ ಶ್ರುಶ್ರೋಷಕರು ಮತ್ತು ನಿರ್ವಾಹಕರ ದ್ವಿಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂಓದಿ: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? | ಸಿಸೋಡಿಯಾರತ್ತ ಎಲ್ಲರ ಚಿತ್ತ!
“ಗ್ರಾಮೀಣ ಭಾಗದ ವೈದ್ಯರು ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸುವ ಹೆಚ್ಚುವರಿ ಒತ್ತಡವನ್ನು ಎದುರಿಸುತ್ತಾರೆ. ಇದು ರೋಗಿಗಳ ಆರೈಕೆಯಿಂದ ಕ್ಲಿನಿಕಲ್ ಅಲ್ಲದ ಆಡಳಿತಾತ್ಮಕ ಕಾರ್ಯಗಳಿಗೆ ವೈದ್ಯರ ಗಮನವನ್ನು ತಿರುಗಿಸುತ್ತದೆ. ಇದು ರೋಗಿಗಳ ಆರೈಕೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರಾಗಿ ಹುದ್ದೆಗಳನ್ನು ವಹಿಸಿಕೊಳ್ಳುವುದನ್ನು ನಿರುತ್ಸಾಹಗೊಳಿಸುತ್ತದೆ. ಜೊತೆಗೆ ಈ ಒತ್ತಡ ಅವರ ವೈದ್ಯಕೀಯ ಕೌಶಲ್ಯಗಳನ್ನು ನಿರಾಕರಿಸುತ್ತದೆ ಎಂದು ಹಲವಾರು ವೈದ್ಯರು ಭಾವಿಸುತ್ತಾರೆ” ಎಂದು ಅಧಿಕಾರಿ ಹೇಳಿದ್ದಾರೆ.
ವೈದ್ಯಕೀಯ ವೃತ್ತಿಪರರ ಆಸಕ್ತಿಯ ಕೊರತೆಯ ಕಾರಣಕ್ಕೆ ತಾತ್ಕಾಲಿಕವಾಗಿ ಈ ಅಂತರವನ್ನು ತುಂಬಲು ಅಲ್ಪಾವಧಿಯ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳು ಆಡಳಿತಾತ್ಮಕ ಹೊರೆಯನ್ನು ಮೀರಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸೌಲಭ್ಯಗಳ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯು ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವೈದ್ಯರೊಬ್ಬರು ಮಾತನಾಡಿ, ಹಲವು ಗ್ರಾಮೀಣ ಆರೋಗ್ಯ ಕೇಂದ್ರಗಳು ಸೀಮಿತ ಸಂಪನ್ಮೂಲಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ನೀಡುವುದು ಕಷ್ಟಕರವಾಗಿದೆ. ಸಿಬ್ಬಂದಿ ವಾಸಿಸುವ ಕ್ವಾರ್ಟರ್ಸ್‌ಗಳು ಸಾಮಾನ್ಯವಾಗಿ ಕೆಳದರ್ಜೆಯದ್ದಾಗಿರುತ್ತವೆ. ಮೂಲಭೂತ ಸೌಕರ್ಯಗಳ ಲಭ್ಯತೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಾಲೆಗಳ ಲಭ್ಯತೆ ಸೀಮಿತವಾಗಿರುತ್ತದೆ. ಈ ಕಾರಣಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರಲ್ಲಿ ಹಿಂಜರಿಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


