Homeಮುಖಪುಟಐಡಿ ಪುರಾವೆ ಇಲ್ಲದೆ 2000ರೂ. ನೋಟುಗಳ ವಿನಿಮಯದ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಐಡಿ ಪುರಾವೆ ಇಲ್ಲದೆ 2000ರೂ. ನೋಟುಗಳ ವಿನಿಮಯದ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಮೇ 19 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಲಾವಣೆಯಿಂದ ₹2,000 ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಅದಾದ ಬಳಿಕ ಯಾವುದೇ ಐಡಿ ಪುರಾವೆ ಇಲ್ಲದೆ ಅತ್ಯಧಿಕ ಮೌಲ್ಯದ ಕರೆನ್ಸಿ 2000 ರೂ. ಮೌಲ್ಯದ ನೋಟನ್ನು ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನುಮತಿ ನೀಡಿತು. ಈ ಅನುಮತಿಯನ್ನು ಪ್ರಶ್ನಿಸಿ ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಮನವಿ ಸಲ್ಲಿಸಿದರು. ಇಂದು (ಸೋಮವಾರ) ದೆಹಲಿ ಹೈಕೋರ್ಟ್ ಅವರ ಮನವಿಯನ್ನು ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು, ಅಶ್ವಿನಿ ಉಪಾಧ್ಯಾಯ  ಸಲ್ಲಿಸಿದ ”ಮನವಿಯನ್ನು ವಜಾಗೊಳಿಸಲಾಗಿದೆ” ಎಂದು  ಹೇಳಿದೆ. ವಿವರವಾದ ಆದೇಶಕ್ಕಾಗಿ ಕಾಯಲಾಗಿದೆ.

ಐಡಿ ಪುರಾವೆಗಳಿಲ್ಲದೆ ಬ್ಯಾಂಕ್ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್‌ಬಿಐ ಅನುಮತಿ ನೀಡಿರುವುದು ಅನಿಯಂತ್ರಿತ ಮತ್ತು ಅಭಾಗಲಬ್ಧ ಎಂದು ಅರ್ಜಿದಾರರು ಕರೆದಿದ್ದಾರೆ. ಇದು ಸಂವಿಧಾನದ 14ನೇ ವಿಧಿಯನ್ನು (ಕಾನೂನಿನ ಮುಂದೆ ಸಮಾನತೆ ಮತ್ತು ಕಾನೂನುಗಳ ಸಮಾನ ರಕ್ಷಣೆ) ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು.

”ಅಂತಹ ದೊಡ್ಡ ಪ್ರಮಾಣದ ಕರೆನ್ಸಿಯು ಕೆಲವೇ ವ್ಯಕ್ತಿಗಳ ಲಾಕರ್‌ಗಳಲ್ಲಿದೆ ಅಥವಾ ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು, ಮಾವೋವಾದಿಗಳು, ಮಾದಕವಸ್ತು ಕಳ್ಳಸಾಗಣೆದಾರರು, ಗಣಿಗಾರಿಕೆ ಮಾಫಿಯಾಗಳು ಮತ್ತು ಭ್ರಷ್ಟರಿಂದ ಸಂಗ್ರಹಿಸಲ್ಪಟ್ಟಿದೆ” ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2000 ಮುಖಬೆಲೆ ನೋಟ್ ಬ್ಯಾನ್: 20,000ರೂ. ವರೆಗೆ ಹಣ ವಿನಿಮಯಕ್ಕೆ ಗುರುತಿನ ಚೀಟಿ ಅಗತ್ಯವಿಲ್ಲ ಎಂದು ಎಸ್‌ಬಿಐ

ಕಳೆದ ಮಂಗಳವಾರ, ಆರ್‌ಬಿಐ ಈ ಅರ್ಜಿಯನ್ನು ವಿರೋಧಿಸಿತು. 2000 ರೂ. ನೋಟುಗಳ ಹಿಂಪಡೆಯುವಿಕೆಯು ನೋಟು ಬ್ಯಾನ್‌ ಅಲ್ಲ. ಶಾಸನಬದ್ಧವಾಗಿ ಮತ್ತು ಕಾರ್ಯಾಚರಣೆಯ ಅನುಕೂಲಕ್ಕಾಗಿ ಅವುಗಳ ವಿನಿಮಯವನ್ನು ಸಕ್ರಿಯಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಆರ್‌ಬಿಐ ಹೇಳಿದೆ.

ಆರ್‌ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಪರಾಗ್ ಪಿ ತ್ರಿಪಾಠಿ, ”ಇಂತಹ ವಿಷಯಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಒತ್ತಿ ಹೇಳಿದರು.

ಆಗ ಉಪಾಧ್ಯಾಯ ಅವರು, ”ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತಾನು ಪ್ರಶ್ನಿಸುತ್ತಿಲ್ಲ ಆದರೆ ಯಾವುದೇ ಚೀಟಿ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯವನ್ನು ವಿರೋಧಿಸಿದ್ದೇನೆ. ಬ್ಯಾಂಕ್ ಖಾತೆಗಳಲ್ಲಿ ಠೇವಣಿಗಳ ಮೂಲಕ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಬೇಕು” ಎಂದು ನ್ಯಾಯಾಲಯಕ್ಕೆ ಹೇಳಿದರು.

”ಹೆಚ್ಚಿನ ಮೌಲ್ಯದ ಕರೆನ್ಸಿಯಲ್ಲಿ ನಗದು ವಹಿವಾಟು ಭ್ರಷ್ಟಾಚಾರದ ಮುಖ್ಯ ಮೂಲವಾಗಿದೆ. ಭಯೋತ್ಪಾದನೆ, ನಕ್ಸಲಿಸಂ, ಪ್ರತ್ಯೇಕತಾವಾದ, ಮೂಲಭೂತವಾದ, ಜೂಜು, ಕಳ್ಳಸಾಗಣೆ, ಮನಿ ಲಾಂಡರಿಂಗ್, ಅಪಹರಣ, ಸುಲಿಗೆ, ಲಂಚ, ವರದಕ್ಷಿಣೆ ಮುಂತಾದ ಕಾನೂನುಬಾಹಿರ ಚಟುವಟಿಕೆಗಳಿಗೆ ಇದನ್ನು ಬಳಸಲಾಗುತ್ತದೆ” ಎಂದು ಅವರು ಹೇಳಿದರು.

2000 ರೂ. ಕರೆನ್ಸಿ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡುವುದರಿಂದ ಕಪ್ಪು ಹಣ ಮತ್ತು ಅಸಮಾನ ಆಸ್ತಿ ಹೊಂದಿರುವ ಜನರನ್ನು ಸುಲಭವಾಗಿ ಗುರುತಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮೇ 19ರಂದು ಆರ್‌ಬಿಐ 2,000 ರೂ. ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಮತ್ತು ಅವುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ” ಎಂದು ಅದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...