Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 20,000 ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 20,000 ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

- Advertisement -
- Advertisement -

ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಸುಮಾರು 20,000 ಮಂದಿ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.

ಪ್ರಧಾನಿಯವರ ಹೇಳಿಕೆಗಳು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ಭಾರತೀಯ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿವೆ. ಈ ಭಾಷಣವು ಅಪಾಯಕಾರಿ ಮತ್ತು ಭಾರತದ ಮುಸ್ಲಿಮರ ಮೇಲೆ ನೇರ ದಾಳಿಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ ದ್ವೇಷದ ಹೇಳಿಕೆ ಬಗ್ಗೆ ಸಾರ್ವಜನಿಕ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ಚುನಾವಣಾ ಆಯೋಗವು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಸೋಮವಾರ ಮೂವರು ಸದಸ್ಯರ ಕಾಂಗ್ರೆಸ್ ನಿಯೋಗವು  ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಮತ್ತು ಕಾಂಗ್ರೆಸ್‌ಗೆ ಮತ ಹಾಕದಂತೆ ಮತದಾರರ ಮನವೊಲಿಸಲು ಧರ್ಮವನ್ನು ಬಳಸಿದ್ದಕ್ಕೆ ಮತ್ತು ಅವರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಧಾನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಿಯೋಗದ ನೇತೃತ್ವ ವಹಿಸಿದ್ದ ಅಭಿಷೇಕ್ ಮನು ಸಿಂಘ್ವಿ ಮಾತನಾಡಿ, ಪ್ರಧಾನಿಯವರು ಮುಸ್ಲಿಂ ಸಮುದಾಯವನ್ನು ನುಸುಳುಕೋರರಿಗೆ ಹೋಲಿಸಿದ್ದಾರೆ ಮತ್ತು ತಮ್ಮ ಮಂಗಳಸೂತ್ರದ ಬಗ್ಗೆ ಮಾತನಾಡಿ ಹಿಂದೂ ಧರ್ಮವನ್ನು ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಸಂವಿಧಾನವನ್ನು ಗುರಿಯಾಗಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...