ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 2012ರ ಮಂಗಳೂರು ‘ಹೋಮ್‌ಸ್ಟೇ ದಾಳಿ’ ಪ್ರಕರಣದ 40 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ.
ಈ ಸಂಬಂಧ ಪೊಲೀಸರು 44 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರಲ್ಲಿ ಮೂವರು ಪತ್ರಕರ್ತರ ವಿರುದ್ಧದ ಆರೋಪಗಳನ್ನು ಸರ್ಕಾರವು ಕೈಬಿಡುವಾಗ ವೇಳೆಗಾಘಲೇ ವಿಚಾರಣೆಯ ಸಮಯದಲ್ಲಿ ಮೂವರು ಆರೋಪಿಗಳು ಸಾವನ್ನಪ್ಪಿದರು.
ಜುಲೈ 28, 2012 ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಮ್‌ಸ್ಟೇಯಲ್ಲಿ ಯುವಕ-ಯುವತಿಯರು ಭಾಗವಹಿಸಿದ್ದ ಹುಟ್ಟುಹಬ್ಬದ ಪಾರ್ಟಿಯ ಮೇಲೆ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಹಲ್ಲೆ ನಡೆಸಿದ್ದರು. ತನಿಖೆಯ ನಂತರ ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಯುವಕರು ಮದ್ಯ ಸೇವಿಸಿ ಅಸಭ್ಯ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದುತ್ವವಾದಿ ಸುಭಾಷ್ ಪಡೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ದಾಳಿಯ ಸಂದರ್ಭದಲ್ಲಿ, ಹಿಂದೂ ಜಾಗರಣ ವೇದಿಕೆ ಸದಸ್ಯರು ಮಹಿಳೆಯರನ್ನು ವಿವಸ್ತ್ರಗೊಳಿಸಿದರು ಮತ್ತು ಕನಿಷ್ಠ 12 ಜನರ ಮೇಲೆ ಹಲ್ಲೆ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿಡಿಯೋ ಪತ್ರಕರ್ತರನ್ನು ಕೂಡ ಬಂಧಿಸಲಾಗಿದೆ. ಪತ್ರಕರ್ತರೊಬ್ಬರ ಮೇಲಿನ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂಪಡೆದಿದ್ದು, 2018ರಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.
ರಾಜ್ಯ ಮಹಿಳಾ ಆಯೋಗವೂ ಘಟನೆಯ ಬಗ್ಗೆ ತನಿಖೆ ನಡೆಸಿ ಅಂದಿನ ಗೃಹ ಸಚಿವ ಆರ್.ಅಶೋಕ ಅವರಿಗೆ ವರದಿ ಸಲ್ಲಿಸಿ, ‘ಪೊಲೀಸ್ ವೈಫಲ್ಯ’ ಮತ್ತು ದಾಳಿಯ ಸ್ವರೂಪದ ಹಿನ್ನೆಲೆಯಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ನೇತೃತ್ವದ ತಂಡದಿಂದ ತನಿಖೆಗೆ ಶಿಫಾರಸು ಮಾಡಿದ್ದರು.
ಇದನ್ನೂ ಓದಿ; ಕನ್ನಡಿಗರಿಗೆ ಉದ್ಯೋಗ ಮೀಸಲಾತಿ : ಕರಡು ಮಸೂದೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್