Homeಮುಖಪುಟ2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, 'ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ' ಎಂದು ಹೇಳಿದ್ದಾರೆ.

- Advertisement -
- Advertisement -

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಆದರೆ ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, ‘ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.

₹ 1,000 ಮತ್ತು ₹ 500 ನೋಟುಗಳನ್ನು ನಿಷೇಧಿಸುವ ನವೆಂಬರ್ 2016 ರ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಸರ್ಕಾರದ ಈ ಕ್ರಮವು ಕಾನೂನುಬಾಹಿರವಾಗಿದೆ, ನೂರಾರು ಜನರ ಸಾವಿಗೆ ಕಾರಣವಾಗಿದೆ ಮತ್ತು ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ ಎಂದು ವಾದಿಸಿದ್ದರು.

ಪ್ರಧಾನಿ ಮೋದಿ ಅಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಈ ಕ್ರಮಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನೋಟ್‌ ಬ್ಯಾನ್ ನಡೆದು ಮೂರು ವರ್ಷಗಳ ನಂತರ ಸರಿ ಸುಮಾರು 99.3% ನಷ್ಟು ನೋಟುಗಳು ವಾಪಾಸು ಬ್ಯಾಂಕಿಗೆ ಬಂದಿವೆ ಎಂದು ಆರ್‌ಬಿಐ 2018 ರಲ್ಲಿ ವರದಿ ಮಾಡಿತ್ತು. ಪ್ರಮುಖ ಆರ್ಥಿಕ ತಜ್ಞರು ಒಕ್ಕೂಟ ಸರ್ಕಾರದ ಈ ನೀತಿ ವಿಫಲ ಯತ್ನ ಎಂದು ತಿಳಿಸಿದ್ದರು. ಸರ್ಕಾರದ ಈ ಕ್ರಮದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆ ಮತ್ತು ಅದರ GDP ಬೆಳವಣಿಗೆ ದರವನ್ನು ಕಡಿಮೆ ಆಯಿತು. ನೋಟ್‌ ರದ್ದತಿಯಿಂದಲೇ 15 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...