Homeಮುಖಪುಟ2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು...

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಬಹುನಿರೀಕ್ಷಿತ ತೀರ್ಪು ಬುಧವಾರ ಹೊರಬಿದ್ದಿದ್ದು, ಕೊಯಮತ್ತೂರಿನ ಮಹಿಳಾ ವಿಶೇಷ ನ್ಯಾಯಾಲಯವು ಎಲ್ಲಾ ಒಂಬತ್ತು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ. ದುಷ್ಕರ್ಮಿಗಳ ಗುಂಪೊಂದು ಮಹಿಳೆಯರನ್ನು ಹುಸಿ ಸ್ನೇಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಈ ಪ್ರಕರಣ 2019ರಲ್ಲಿ ಬೆಳಕಿಗೆ ಬಂದಿತ್ತು. 2019 ರ ಪೊಲ್ಲಾಚಿ ಲೈಂಗಿಕ

ನ್ಯಾಯಮೂರ್ತಿ ನಂದಿನಿ ದೇವಿ ನೇತೃತ್ವದ ಮಹಿಳಾ ಪೀಠವು, ಆರೋಪಿಗಳಾದ ತಿರುನಾವುಕರಸು, ಸಬರೀಶನ್, ವಸಂತ ಕುಮಾರ್, ಸತೀಶ್, ಮಣಿವಣ್ಣನ್, ಹರನ್‌ಪಾಲ್, ಬಾಬು, ಅರುಳನಂತಮ್ ಮತ್ತು ಅರುಣ್ ಕುಮಾರ್ ಅವರನ್ನು ಕಾನೂನಿನ ಬಹು ವಿಭಾಗಗಳ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದ್ದಾರೆ. ನ್ಯಾಯಾಲಯವು ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಸಂತ್ರಸ್ತರೊಬ್ಬರು ಕಳ್ಳತನದ ದೂರನ್ನು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು. ತನಿಖೆಯ ವೇಳೆ ಇದು ದೊಡ್ಡ ಸಂಘಟಿತ ಲೈಂಗಿಕ ದೌರ್ಜನ್ಯ ಎಂದು ತಿಳಿದುಬಂದಿತ್ತು. ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ವೀಡಿಯೊಗಳು ವೈರಲ್ ಆದ ನಂತರ, ಆಗಿನ ಆಡಳಿತಾರೂಢ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ವಿರುದ್ಧ ತಮಿಳುನಾಡಿನಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಜೊತೆಗೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಇತರ ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಒಟ್ಟುಗೂಡಿ ಹೋರಾಟ ಮಾಡಿದ್ದರಿಂದ ರಾಜಕೀಯ  ಚರ್ಚೆಯನ್ನೂ ಹುಟ್ಟುಹಾಕಿತ್ತು. ಪ್ರಕರಣವು ನ್ಯಾಯ ಮತ್ತು ಮಹಿಳಾ ಸುರಕ್ಷತೆಗಾಗಿ ವ್ಯವಸ್ಥಿತ ಸುಧಾರಣೆಯನ್ನು ಸರ್ಕಾರಕ್ಕೆ ಒತ್ತಾಯಿಸಿದ್ದವು.

ಆರಂಭದಲ್ಲಿ ಪ್ರಕರಣವನ್ನು ನಿರ್ವಹಿಸುತ್ತಿದ್ದ ಅಪರಾಧ ತನಿಖಾ ಇಲಾಖೆಯು ಸಾರ್ವಜನಿಕ ಒತ್ತಡದ ನಂತರ ಅದನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಿತ್ತು.

ವಿಚಾರಣೆಯ ಉದ್ದಕ್ಕೂ, ಸರ್ಕಾರಿ ವಕೀಲರು 50 ಕ್ಕೂ ಹೆಚ್ಚು ಸಾಕ್ಷಿಗಳು, 200 ಕ್ಕೂ ಹೆಚ್ಚು ದಾಖಲೆಗಳು ಮತ್ತು 400 ಡಿಜಿಟಲ್ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರು. ಎಂಟು ಸಂತ್ರಸ್ತರು ಸಾಕ್ಷ್ಯ ಹೇಳಲು ನ್ಯಾಯಾಲಯದ ಮುಂದೆ ಹಾಜರಾಗಿದ್ದರು ಮತ್ತು ಆರೋಪಿಗಳು 50 ಪ್ರಶ್ನೆಗಳಿಗೆ ಲಿಖಿತವಾಗಿ ಪ್ರತಿಕ್ರಿಯಿಸಿದ್ದರು. 2019 ರ ಪೊಲ್ಲಾಚಿ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ನಕ್ಸಲರೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿ: ಕೇಂದ್ರ ಸರ್ಕಾರಕ್ಕೆ ಭಾರತ್ ಬಚಾವೋ ಆಂದೋಲನ ಒತ್ತಾಯ

ಕೇಂದ್ರವು ನಕ್ಸಲರೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಬೇಕು: ಭಾರತ್ ಬಚಾವೋ ದೆಹಲಿ ಭೇಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...