Homeಮುಖಪುಟ2020: ಆತ್ಮಹತ್ಯೆ ಮಾಡಿಕೊಂಡವರಲ್ಲಿ ರೈತರಿಗಿಂತ ಉದ್ಯಮಿಗಳೇ ಹೆಚ್ಚು

2020: ಆತ್ಮಹತ್ಯೆ ಮಾಡಿಕೊಂಡವರಲ್ಲಿ ರೈತರಿಗಿಂತ ಉದ್ಯಮಿಗಳೇ ಹೆಚ್ಚು

- Advertisement -
- Advertisement -

ಭಾರತದಲ್ಲಿ 2020 ರ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 2020 ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 11,716 ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಅವಧಿಯಲ್ಲಿ ದೇಶದಾದ್ಯಂತ 10,677 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂದಾಜಿಸಿದೆ.

2015 ರಲ್ಲಿ, 100 ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಾಗ ರೈತ ಆತ್ಮಹತ್ಯೆಯ ಅನುಪಾತ 144 ಇತ್ತು. ಆದರೆ ಇದು 2020 ರ ವೇಳೆಗೆ 100:91 ಆಗಿದೆ ಎಂದು ವರದಿ ಉಲ್ಲೇಖಿಸಿದೆ. ಹೆಚ್ಚಿನ ಆತ್ಮಹತ್ಯೆಗಳು ಆರ್ಥಿಕ ಮುಗ್ಗಟ್ಟಿನಿಂದ ಸಂಭವಿಸಿವೆ ಎಂದು ತಿಳಿದುಬಂದಿದೆ. ಅಲ್ಲದೆ, ಕೌಟುಂಬಿಕ ಸಂಬಂಧಗಳಲ್ಲಿನ ಸಮಸ್ಯೆಗಳು ಕೂಡಾ ಉದ್ಯಮಿಗಳು ಆತ್ಮಹತ್ಯೆ ಎಸಗಲು ಕಾರಣವಾಗಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

2020 ರ ವೇಳೆಗೆ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ಯಮಿಗಳ ಸಂಖ್ಯೆಯು 29.4% ಹೆಚ್ಚಾಗಿದೆ. 2019 ರಲ್ಲಿ ಈ ಬೆಳವಣಿಗೆಯು 13.3% ರಷ್ಟಿತ್ತು. ಅದೇ ಸಮಯದಲ್ಲಿ, ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಸಂಖ್ಯೆಯು ಹಿಂದಿನ ವರ್ಷಕ್ಕಿಂತ 3.9% ರಷ್ಟು ಹೆಚ್ಚಾಗಿದೆ. ಆದರೆ ರೈತರ ಆತ್ಮಹತ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆಯರ ಸಂಖ್ಯೆ ಸೇರಿಲ್ಲ ಎಂಬ ಆರೋಪಗಳಿವೆ.

ಉದ್ಯಮಿಗಳ ಆತ್ಮಹತ್ಯೆ ವರದಿಯ ಹಿನ್ನಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರೈತರು ಮತ್ತು ಉದ್ಯಮಿಗಳು ಒಕ್ಕೂಟ ಸರ್ಕಾರದ “ಕೆಟ್ಟ ನೀತಿಗಳ” ಬಲಿಪಶುಗಳು ಎಂದು ಅವರು ಆರೋಪಿಸಿದ್ದಾರೆ.

ಟ್ವಿಟರ್‌ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಡೇಟಾವನ್ನು ಉಲ್ಲೇಖಿಸಿರುವ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿರುವ ರಾಹುಲ್‌ ಗಾಂಧಿ, “ಉದ್ಯಮಿಗಳಾಗಲಿ ಅಥವಾ ರೈತರಾಗಲಿ, ಎಲ್ಲರೂ ಒಕ್ಕೂಟ ಸರ್ಕಾರದ ಕೆಟ್ಟ ನೀತಿಗಳ ಬಲಿಪಶುಗಳು. ಆರ್ಥಿಕತೆಯನ್ನು ಸರಿಪಡಿಸಿ, ಜೀವಗಳನ್ನು ಉಳಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕಳೆದುಹೋದ ದಿನಗಳು- 2: ಕರ್ನಾಟಕದ ಪ್ರಥಮ ಮಹಿಳಾ ಉದ್ಯಮಿ ಸಾಕಮ್ಮ

 

ಆತ್ಮಹತ್ಯೆ ಅಂಕಿಅಂಶಗಳು

2016
ರೈತರು – 11379
ಉದ್ಯಮಿಗಳು – 8573

2017
ರೈತರು – 10655
ಉದ್ಯಮಿಗಳು – 7778

2018
ರೈತರು – 10349
ಉದ್ಯಮಿಗಳು – 7990

2019
ರೈತರು – 10281
ಉದ್ಯಮಿಗಳು – 9052

2020
ರೈತರು – 10677
ಉದ್ಯಮಿಗಳು – 11716

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...