Homeಕರ್ನಾಟಕಪುನೀತ್‌ ರಾಜ್‌ಕುಮಾರ್‌ರವರಿಗೆ 2021ನೇ ಸಾಲಿನ 'ಬಸವಶ್ರೀ ಪ್ರಶಸ್ತಿ'

ಪುನೀತ್‌ ರಾಜ್‌ಕುಮಾರ್‌ರವರಿಗೆ 2021ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’

- Advertisement -
- Advertisement -

ಇತ್ತೀಚೆಗೆ ಅಗಲಿದ ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲು ಮುರುಘಾ ಮಠ ನಿರ್ಧರಿಸಿದೆ. ಮುಂದಿನ ವರ್ಷ ಬಸವ ಜಯಂತಿಯಂದು ಪುನೀತ್ ರಾಜ್‌ಕುಮಾರ್ ಕುಟುಂಬಕ್ಕೆ ಪ್ರಶಸ್ತಿ ಪ್ರದಾನ ಮಾಡುಲಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಈ ಕುರಿತು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಪುನೀತ್ ರಾಜ್‌ಕುಮಾರ್‌ರವರು ಸರ್ಕಾರದ ಹಲವು ಸೇವೆಗಳಿಗೆ ಸಂಭಾವನೆ ಪಡೆಯದೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಾಲನಟನಾಗಿ, ನಾಯಕನಟನಾಗಿ, ನಿರ್ಮಾಪಕನಾಗಿ, ಹಾಡುಗಾರನಾಗಿ ಕನ್ನಡ ಚಿತ್ರರಂಗಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಈ ಸೇವೆಯನ್ನು ಪರಿಗಣಿಸಿ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ 2021ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ


ಪುನೀತ್‌ ರಾಜ್‌ಕುಮಾರ್‌ರವರನ್ನು ಕಳೆದುಕೊಂಡು ಇಡೀ ನಾಡು ದುಃಖದಲ್ಲಿದೆ. ಇದೇ ನವೆಂಬರ್ 10 ರಂದು ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಂತಾಪಗಳನ್ನು ತಿಳಿಸುತ್ತೇವೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಬಸವಶ್ರೀ ಪ್ರಶಸ್ತಿಯು 5 ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಗೌರವ ನೀಡಬೇಕು ಎಂಬ ಕೂಗು ಅಭಿಮಾನಿಗಳು ಮತ್ತು ಚಿತ್ರರಂಗದಿಂದ ಕೇಳಿ ಬರುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...