Homeಮುಖಪುಟಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ - ಭಾರತದ ವರ್ಚಸ್ಸಿಗೆ ಧಕ್ಕೆ ಎಂದ...

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ಜುಕರ್‌ಬರ್ಗ್ ಸಂಸತ್ತಿನಲ್ಲಿ ಕ್ಷಮೆ ಕೇಳಲು ಸಮ್ಸನ್ಸ್ ಜಾರಿಗೆ ಸಿದ್ದತೆ ಎಂದ ಆಡಳಿರೂಢ ಪಕ್ಷ

- Advertisement -
- Advertisement -

ಲೋಕಸಭೆ 2024ರ ಚುನಾವಣೆಯಲ್ಲಿ ಭಾರತದ ಆಡಳಿತ ಪಕ್ಷವು ಸೋತಿದೆ ಎಂದು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದು ಇದೀಗ ವಿವಾದಕ್ಕೆ ಕಾರಣಗವಾಗಿದೆ. ಬಿಜೆಪಿ ಈ ಹೇಳಿಕೆಯನ್ನು ಭಾರತದ ವರ್ಚಸ್ಸಿಗೆ ಕಳಂಕ ಎಂದು ಪ್ರತಿಪಾದಿಸಿದ್ದು, ಹಾಗಾಗಿ ಈ ಬಗ್ಗೆ ಕ್ಷಮೆಯಾಚಿಸುವಂತೆ ಮೆಟಾಗೆ ಸಮನ್ಸ್‌ ಜಾರಿ ಮಾಡುವುದಾಗಿ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಂಗಳವಾರ ಹೇಳಿದ್ದಾರೆ. ಲೋಕಸಭೆ 2024ರ ಚುನಾವಣೆ

“ಈ ತಪ್ಪು ಮಾಹಿತಿಗಾಗಿ ಸಮಿತಿಯು ಮೆಟಾಗೆ ಸಮನ್ಸ್ ಜಾರಿ ಮಾಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವೊಂದರ ಬಗ್ಗೆ ತಪ್ಪಾದ ಮಾಹಿತಿ ನೀಡುವುದು ಅದರ ವರ್ಚಸ್ಸಿಗೆ ಕಳಂಕ ತರುತ್ತದೆ. ಈ ತಪ್ಪಿಗಾಗಿ ಈ ಸಂಸ್ಥೆ ಭಾರತೀಯ ಸಂಸತ್ತಿನಲ್ಲಿ ಮತ್ತು ಇಲ್ಲಿನ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಸಮಸ್ಯೆಗಳಿಂದಾಗಿ ಭಾರತದಲ್ಲಿ ಹಾಲಿ ಸರ್ಕಾರ 2024 ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದೆ ಎಂದು ಮೆಟಾ ಸಮೂಹದ ಕಂಪನಿಗಳಲ್ಲಿ ನಿಯಂತ್ರಣ ಪಾಲನ್ನು ಹೊಂದಿರುವ ಫೇಸ್‌ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದರು. ಅವರ ಹೇಳಿಕೆಯು “ವಾಸ್ತವಿಕವಾಗಿ ತಪ್ಪಾಗಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿ ಬಂದಿರುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದು ಅಶ್ವಿನಿ ವೈಷ್ಣವ್ ಅವರು ಎಕ್ಸ್‌ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೆಟಾವನ್ನು ಟ್ಯಾಗ್ ಮಾಡಿದ್ದಾರೆ. ಲೋಕಸಭೆ 2024ರ ಚುನಾವಣೆ

“ಕೊರೊನಾ ಸಮಯದಲ್ಲಿ 800 ಮಿಲಿಯನ್‌ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ವಿಶ್ವಾದ್ಯಂತ ರಾಷ್ಟ್ರಗಳಿಗೆ ನೆರವು ನೀಡುವುದರಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3 ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಜುಕರ್‌ಬರ್ಗ್, 2024 ಪ್ರಪಂಚದಾದ್ಯಂತ ದೊಡ್ಡ ಚುನಾವಣಾ ವರ್ಷವಾಗಿತ್ತು. ಈ ವರ್ಷದಲ್ಲಿ ಭಾರತದಂತಹ ಹಲವು ದೇಶಗಳಲ್ಲಿ, ಅಧಿಕಾರದಲ್ಲಿರುವವರು ಮತದಾನದಲ್ಲಿ ಸೋತರು ಎಂದು ಹೇಳಿದ್ದರು.

2024 ರ ಚುನಾವಣೆಯಲ್ಲಿ ಬಿಜೆಪಿ ತನ್ನ ಬಹುಮತವನ್ನು ಕಳೆದುಕೊಂಡಿತ್ತು. ಆದರೆ, ಪಕ್ಷದ ನೇತೃತ್ವದ ಆಡಳಿತ ಮೈತ್ರಿಕೂಟವು ಆರಾಮದಾಯಕ ಬಹುಮತವನ್ನು ಗಳಿಸಿತ್ತು.ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...