Homeಮುಖಪುಟ2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷದ ನಾಯಕರಿಂದ ಪ್ರಧಾನಿ ಹುದ್ದೆ ಆಫರ್: ಗಡ್ಕರಿ

2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷದ ನಾಯಕರಿಂದ ಪ್ರಧಾನಿ ಹುದ್ದೆ ಆಫರ್: ಗಡ್ಕರಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ತಮಗೆ ಪ್ರಧಾನಿ ಹುದ್ದೆಯನ್ನು ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ, ಈ ಪ್ರಸ್ತಾಪವು ತನ್ನ ನಂಬಿಕೆಗೆ ವಿರುದ್ಧವಾಗಿದೆ ಎಂದು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾಗ್ಪುರದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, “ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಪ್ರಧಾನಿ ಹುದ್ದೆಯ ಪ್ರಸ್ತಾಪದೊಂದಿಗೆ ನನ್ನನ್ನು ಸಂಪರ್ಕಿಸಿದರು. ನಾನು ಒಪ್ಪಿಗೆ ನೀಡಿದರೆ, ಅವರು ನನನಗೆ ಪ್ರಧಾನಿ ಹುದ್ದೆ ಸಿಗುವಂತೆ ಕೆಲಸ ಮಾಡುವುದಾಗಿ ನನಗೆ ತಿಳಿಸಿದ್ದರು” ಎಂದು ಹೇಳಿದ್ದಾರೆ.

“ನಾನು ತಕ್ಷಣ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ನಾನು ಆ ನಾಯಕನಿಗೆ ಸ್ಪಷ್ಟವಾಗಿ, ನಾನು ತತ್ವ ಸಿದ್ಧಾಂತವನ್ನು ನಂಬುವ ವ್ಯಕ್ತಿ ಎಂದು ಹೇಳಿದ್ದೆ. ನಾನು ಯಾವಾಗಲೂ ತತ್ವ ಸಿದ್ದಾತಗಳ ಮೇಲೆ ಕೆಲಸ ಮಾಡಿದ್ದೇನೆ ಮತ್ತು ಬದುಕಿದ್ದೇನೆ. ನಾನು ಎಂದಿಗೂ ದೇಶದ ಪ್ರಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿರಲಿಲ್ಲ ಎಂದು ನಾನು ಸ್ಪಷ್ಟಪಡಿಸಿದೆ. ಆದ್ದರಿಂದ, ಈ ಯಾವುದೇ ಪ್ರಸ್ತಾಪವನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾನು ಪಾಲನೆ ಮಾಡಿಕೊಂಡು ಬರುತ್ತಿರುವ ತತ್ವ ಸಿದ್ದಾಂತ ಗಳ ಮೇಲೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರಿಗೆ ಹೇಳಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

ತಮಗೆ ಪ್ರಧಾನಿ ಹುದ್ದೆಯ ಭರವಸೆ ನೀಡಿದ ವಿಪಕ್ಷ ನಾಯಕ ಯಾರು ಎಂಬ ಬಗ್ಗೆ ಗಡ್ಕರಿ ಅವರು ಹೇಳಿಲ್ಲ. ಜೊತೆಗೆ ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಅವರು ಹಂಚಿಕೊಳ್ಳಲಿಲ್ಲ. ಆದರೆ ಬಿಜೆಪಿಯ ಅನೇಕ ನಾಯಕರಿಗೆ ಇದು ಆಶ್ಚರ್ಯವನ್ನುಂಟು ಮಾಡಿದೆ ಎಂದು ವರದಿಯಾಗಿದೆ. ಗಡ್ಕರಿ ಅವರು ಮೂಲ ಆರೆಸ್ಸೆಸ್-ಬಿಜೆಪಿಗನಾಗಿದ್ದರೂ, ಅವರಿಗೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಸೌಹಾರ್ದ ಸಂಬಂಧವಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಇಬ್ಬರೊಂದಿಗೆ ಉತ್ತಮ ಅವರು ಸಂಬಂಧ ಹೊಂದಿದ್ದಾರೆ.

ಸಾಮಾನ್ಯವಾಗಿ ಪವಾರ್ ಮತ್ತು ಗಡ್ಕರಿ, ಎರಡು ಸೈದ್ಧಾಂತಿಕವಾಗಿ ವಿಭಿನ್ನ ಪಕ್ಷಗಳನ್ನು ಪ್ರತಿನಿಧಿಸುತ್ತಿದ್ದರೂ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡು ಹಲವು ಭಾರಿ ಪರಸ್ಪರ ಹೊಗಳಿಕೊಂಡಿದ್ದಾರೆ.

ಕಮ್ಯುನಿಸ್ಟ್ ನಾಯಕ ಎ ಬಿ ಬರ್ಧನ್ ಅವರೊಂದಿಗಿನ ತಮ್ಮ ದೀರ್ಘಕಾಲದ ಸ್ನೇಹವನ್ನು ಪುನರುಚ್ಚರಿಸಿದ ಗಡ್ಕರಿ, “ನನ್ನ ಸ್ನೇಹ ಮತ್ತು ಬರ್ಧನ್ ಬಗ್ಗೆ ನನಗೆ ಆಗಾಗ್ಗೆ ಕೇಳಲಾಗುತ್ತದೆ. ಅವರ ಪಕ್ಷಕ್ಕೆ ಅವರ ಬದ್ಧತೆ ಮತ್ತು ವಿಶ್ವಾಸ ನನಗೆ ಇಷ್ಟವಾಯಿತು. ಅದು ರಾಜಕೀಯವಾಗಲಿ ಅಥವಾ ಯಾವುದೇ ವೃತ್ತಿಯಾಗಲಿ ತತ್ವ ಸಿದ್ದಾಂತ ಮುಖ್ಯವಾದುದು” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...