Homeಮುಖಪುಟ2024ರ ಚುನಾವಣೆಗೆ ಸಜ್ಜು: ವಿಪಕ್ಷ ನಾಯಕರನ್ನು ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

2024ರ ಚುನಾವಣೆಗೆ ಸಜ್ಜು: ವಿಪಕ್ಷ ನಾಯಕರನ್ನು ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ

- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ತಿಂಗಳ ಕೊನೆಯಲ್ಲಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಬಂಗಾಳದಲ್ಲಿ ಭರ್ಜರಿ ಯಶಸ್ಸು ಗಳಿಸಿದ ಬಳಿಕ ರಾಷ್ಟ್ರ ರಾಜಧಾನಿಗೆ ಮೊದಲ ಭೇಟಿ ಇದಾಗಿದ್ದು, 2024 ರ ರಾಷ್ಟ್ರೀಯ ಚುನಾವಣೆಯನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರತಿಪಕ್ಷಗಳನ್ನು ಸಜ್ಜುಗೊಳಿಸುವಲ್ಲಿ ಮಮತಾ ಬ್ಯಾನರ್ಜಿಯವರ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದ್ದು, ನಾಲ್ಕು ದಿನಗಳು ದೆಹಲಿಯಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿ ಭೇಟಿಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತುಇತರ  ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ. ಭೇಟಿಯ ದಿನಾಂಕಗಳನ್ನು ಇನ್ನು ನಿಗದಿಪಡಿಸಲಾಗಿಲ್ಲ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸದಂತೆ ಸುವೇಂದುಗೆ ಬಿಜೆಪಿ ನಾಯಕರ ಮನವಿ

“ಚುನಾವಣೆ ನಂತರ ನಾನು ದೆಹಲಿಗೆ ಹೋಗಿಲ್ಲ. ಈಗ ಕೋವಿಡ್ ಪರಿಸ್ಥಿತಿ ಉತ್ತಮವಾಗಿದೆ. ಸಂಸತ್ತಿನ ಸಮಯದಲ್ಲಿ ನಾನು ದೆಹಲಿಗೆ ತೆರಳುತ್ತೇನೆ, ನನ್ನ ಸ್ನೇಹಿತರನ್ನು ಭೇಟಿಯಾಗುತ್ತೇನೆ. ನನಗೆ ಸಮಯ ನೀಡಿದರೆ, ನಾನು ಪ್ರಧಾನಿ ಮತ್ತು ಅಧ್ಯಕ್ಷರನ್ನು ಭೇಟಿ ಮಾಡಬಹುದು” ಎಂದು ಬಂಗಾಳದ ಮುಖ್ಯಮಂತ್ರಿ ಗುರುವಾರ ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ಬಾರಿ ಭೇಟಿಯಾಗಿದ್ದಾರೆ. ಆದರೆ, ಚುನಾವಣಾ ಮಾತುಕತೆಯಾಗಿಲ್ಲ ಎಂದಿದ್ದಾರೆ.

ಬುಧವಾರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ.

ವಿಪಕ್ಷಗಳು 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸುವ ಗುರಿಯಾಗಿಸಿಕೊಂಡಿದ್ದಾರೆ. ಹೀಗಾಗಿ ತಯಾರಿ ನಡೆಯುತ್ತಿದೆ ಎಂಬ ವದಂತಿಗಳು ಹರಡಿವೆ.


‌ಇದನ್ನೂ ಓದಿ: ಮನೆಗೆ ತೆರಳಿ ಗಂಗೂಲಿ ಹುಟ್ಟುಹಬ್ಬಕ್ಕೆ ಹಾರೈಸಿದ ಮಮತಾ ಬ್ಯಾನರ್ಜಿ; ರಾಜಕೀಯ ಕಾರಣ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial