Homeಮುಖಪುಟಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

- Advertisement -
- Advertisement -

ದೇಶದಲ್ಲಿ 2020 ರ ಆರಂಭದಿಂದ ಕಾಣಿಸಿಕೊಂಡ ಕೊರೊನಾ ಸಾಂಕ್ರಾಮಿಕದ ಮೂರು ಅಲೆಗಳಿಂದಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 2.15 ಕೋಟಿ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಸೋಮವಾರ ಹೇಳಿದ್ದಾರೆ.

ಕೊರೊನಾ ಮೊದಲ ಅಲೆ ದೇಶದಲ್ಲಿ ಏಕಾಏಕಿ ಕಾಣಿಸಿಕೊಂಡಾಗ ಪ್ರವಾಸಿಗರ ಆಗಮನವು ಶೇಕಡಾ 93 ರಷ್ಟಿತ್ತು. ಎರಡನೇ ಅಲೆಯಲ್ಲಿ ಶೇಕಡಾ 79ಕ್ಕೆ ಇಳಿಯಿತು ಬಳಿಕ ಮೂರನೇ ಅಲೆಯಲ್ಲಿ ಪ್ರವಾಸಿಗರ ಆಗಮನ ಶೇಕಡಾ 64 ರಷ್ಟು ಕಡಿಮೆಯಾಗಿದೆ ಎಂದು ಕಿಶನ್ ರೆಡ್ಡಿ ಮಾಹಿತಿ ನೀಡಿದ್ದಾರೆ.

“ನಾವು ಪ್ರವಾಸೋದ್ಯಮದ ಮೇಲೆ ಸಾಂಕ್ರಾಮಿಕ ರೋಗದ ಪ್ರಭಾವದ ಕುರಿತು ಅಧ್ಯಯನವನ್ನು ನಡೆಸಿದ್ದೇವೆ. ಈ ಅಧ್ಯಯನದ ಪ್ರಕಾರ, ಮೊದಲ ಅಲೆಯಲ್ಲಿ 1.45 ಕೋಟಿ ಉದ್ಯೋಗ ನಷ್ಟಗಳು, ಎರಡನೇ ತರಂಗದಲ್ಲಿ 52 ಲಕ್ಷ ಮತ್ತು ಮೂರನೇ ಅಲೆಯಲ್ಲಿ 18 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

“ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿಕೊಳ್ಳುವ ಮೊದಲು ದೇಶದಲ್ಲಿ 3.8 ಕೋಟಿ ಜನರು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಕೊರೊನಾದ ಮೂರು ಅಲೆಗಳ ಸಮಯದಲ್ಲಿ ಪ್ರವಾಸೋದ್ಯಮದ ಆರ್ಥಿಕತೆಯು ಗಮನಾರ್ಹವಾಗಿ ಕುಸಿದಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಈ ವಲಯಕ್ಕೆ ಕೆಟ್ಟ ಹೊಡೆತ ನೀಡಿದೆ” ಎಂದು ತಿಳಿಸಿದ್ದಾರೆ.

“ಈ ವಲಯಕ್ಕೆ ಸಹಾಯ ಮಾಡಲು, ಪ್ರಯಾಣ ಮತ್ತು ಪ್ರವಾಸೋದ್ಯಮದ ಪಾಲುದಾರರಿಗೆ 10 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ಮತ್ತು ಪ್ರವಾಸಿ ಮಾರ್ಗದರ್ಶಿಗಳಿಗೆ 1 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುವಂತೆ ನಾನು ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಪ್ರವಾಸಿಗರನ್ನು ಉತ್ತೇಜಿಸಲು, ಮೊದಲ ಐದು ಲಕ್ಷ ಪ್ರವಾಸಿಗರ ವೀಸಾ ಶುಲ್ಕವನ್ನು ಮನ್ನಾ ಮಾಡಲು ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ, 2018 ಮತ್ತು 2020 ರ ನಡುವೆ 25,000 ಕ್ಕೂ ಹೆಚ್ಚು ಭಾರತೀಯರು ನಿರುದ್ಯೋಗ ಅಥವಾ ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ರಾಜ್ಯಸಭೆಗೆ ಈ ಹಿಂದೆ ತಿಳಿಸಿತ್ತು.

ಒಕ್ಕೂಟ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ, 2020 ರ ಸಾಂಕ್ರಾಮಿಕ ವರ್ಷದಲ್ಲಿ ಅತಿ ಹೆಚ್ಚು (3,548) ನಿರುದ್ಯೋಗಿಗಳ ಆತ್ಮಹತ್ಯೆಗಳು ವರದಿಯಾಗಿವೆ . 2018 ರಲ್ಲಿ 2,741 ಮತ್ತು 2019 ರಲ್ಲಿ 2,851 ಮಂದಿ ನಿರುದ್ಯೋಗದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿವಾಳಿತನದಿಂದಾಗಿ, ಸಾಲದಿಂದಾಗಿ 2018 ರಲ್ಲಿ 4,970 ಜನ, 2019 ರಲ್ಲಿ 5,908, 2020 ರಲ್ಲಿ 5,213 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...