Homeಕರ್ನಾಟಕದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

- Advertisement -
- Advertisement -

ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್‌ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.

ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...