Homeಮುಖಪುಟಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

ಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

- Advertisement -
- Advertisement -

ದಕ್ಷಿಣ ಕುವೈತ್‌ನ ಮಂಗಾಫ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ 49 ಮಂದಿಯಲ್ಲಿ 21 ಮಲಯಾಳಿಗಳು ಸೇರಿದ್ದಾರೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯ್‌ ವಿಜಯನ್‌ ದೃಢಪಡಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕುರಿತು ಸಹಕರಿಸಲು ಮತ್ತು ಶವಗಳನ್ನು ಮನೆಗೆ ತರಲು ಸಹಾಯ ಮಾಡಲು ಕುವೈತ್‌ಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇರಳ ಸರ್ಕಾರದ ಅಧೀನದ ಅನಿವಾಸಿ ಕೇರಳೀಯರ(ಎನ್‌ಆರ್‌ಕೆ) ವೆಲ್‌ಫೇರ್ ಏಜೆನ್ಸಿಯ ಮೂಲಗಳು ಹಲವು ಮೃತದೇಹಗಳನ್ನು ಇನ್ನೂ ಗುರುತಿಸಬೇಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಲಯಾಳಿಗಳು ಕೂಡ ಸೇರಿದ್ದಾರೆ.

ಈ ಕುರಿತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ಸಂಪುಟ ಸಭೆಯನ್ನು ಕರೆದಿದ್ದಾರೆ. ಇದಲ್ಲದೆ ಜಗತ್ತಿನಾದ್ಯಂತ ಇದ್ದ ಅನಿವಾಸಿ ಕೇರಳಿಯರ ವೆಲ್‌ಫೇರ್ ಏಜೆನ್ಸಿಯ ಪ್ರತಿನಿಧಿಗಳ ಸಮಾವೇಶ ‘ಲೋಕ ಕೇರಳ ಸಭೆ’ ಯನ್ನು ಗುರುವಾರದಿಂದ ಶನಿವಾರದವರೆಗೆ ತಿರುವನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅವಘಡದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪಿ(27), ಮಲಪ್ಪುರಂನ ಪೆರಿಂತಲ್ಮನ್ನ ಬಾಹುಲೇಯನ್(36), ಕೊಲ್ಲಂನ ಶಮೀರ್ ಉಮರುದ್ದೀನ್(30) ಚೆಂಗಳದ ಕೆ ರೆಂಜಿತ್(34), ಕಾಸರಗೋಡಿನ ಪಿಲಿಕೋಡುವಿನ ಕೇಲು (58) ಕೊಟ್ಟಾಯಂನ ಸ್ಟೆಫಿನ್ ಅಬ್ರಹಾಂ ಸಾಬು(29), ಪತ್ತನಂತಿಟ್ಟದ ಪಂದಳಂನ ಆಕಾಶ್ ಶಶಿಧರನ್(31), ಕೊಲ್ಲಂನ ಪುನಲೂರಿನ ಸಾಜನ್ ಜಾರ್ಜ್(29), ಪತ್ತನಂತಿಟ್ಟಾದಲ್ಲಿ ಸಾಜು ವರ್ಗೀಸ್ (56),  ಪತ್ತನಂತಿಟ್ಟದ ಪಿ ವಿ ಮುರಳೀಧರನ್(68), ಕೊಲ್ಲಂನ ಲುಕೋಸ್(48), ತಿರುವಲ್ಲಾದ ಥಾಮಸ್ ಉಮ್ಮನ್(37)  ಮತ್ತು ಮಲಪ್ಪುರಂನ ನೂಹು ಮೃತರು ಎಂದು ಹೇಳಲಾಗಿದೆ.

ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಮಂಗಾಫ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತೆರಳಿದ್ದಾರೆ.

ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನೇಕ ದೇಹಗಳು ತೀವ್ರವಾಗಿ ಸುಟ್ಟುಹೋಗಿವೆ ಮತ್ತು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಮೃತದೇಹಗಳ ಗುರುತಿಸುವಿಕೆಗಾಗಿ ಡಿಎನ್‌ಎ ಪರೀಕ್ಷೆಗಳ ಅಗತ್ಯವಿದೆ. ವಾಯುಪಡೆಯ ವಿಮಾನವು ಸಿದ್ಧವಾಗಿದೆ. ಮೃತದೇಹ ಗುರುತು ಪತ್ತೆಯಾದ ತಕ್ಷಣ ಭಾರತಕ್ಕೆ ಮೃತದೇಹವನ್ನು ತಂದು ಕುಟುಂಬಕ್ಕೆ ಹಸ್ತಾಂತರ ಮಾಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಕಾರಣವಾದ ಸಂದರ್ಭಗಳನ್ನು ಬಹಿರಂಗಪಡಿಸಲು ತನಿಖೆಯನ್ನು ನಡೆಸಲಾಗುತ್ತಿದೆ. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕುವೈತ್‌ನ ರಕ್ಷಣಾ ಮತ್ತು ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸೆಫ್ ಅಲ್-ಸಾಬಾ ಕಟ್ಟಡದ  ಮಾಲಕರನ್ನು ಮತ್ತು ಕಟ್ಟಡದ ಸಿಬ್ಬಂದಿಯನ್ನು ಬಂಧಿಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಇಲ್ಲಿಯವರೆಗೆ ಅಗ್ನಿ ದುರಂತಕ್ಕೆ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅಗ್ನಿ ದುರಂತ ಹೆಚ್ಚಿನ ಹೊಗೆ ಹೊರ ಸೂಸಲು ಕಾರಣವಾಗಿದೆ. ಹೊಗೆ ತುಂಬಿದ್ದರಿಂದ ಮೆಟ್ಟಿಲುಗಳ ಕೆಳಗೆ ಓಡಲು ಪ್ರಯತ್ನಿಸುತ್ತಿರುವಾಗ ಅನೇಕ ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...