ಛತ್ತೀಸ್‌ಗಢ ಎನ್‌ಕೌಂಟರ್ : 22 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್‌ಗಢದಲ್ಲಿ ಗುರುವಾರ (ಮಾ.20) ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿ ಅರಣ್ಯದೊಳಗೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಗಳು ತಿಳಿಸಿವೆ. ಸ್ಥಳದಿಂದ ಇಬ್ಬರು ನಕ್ಸಲರ ಮೃತದೇಹಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ … Continue reading ಛತ್ತೀಸ್‌ಗಢ ಎನ್‌ಕೌಂಟರ್ : 22 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು