Homeರಾಜಕೀಯಶಿಂಧೆ ಬಣದ 22 ಶಾಸಕರು ಬಿಜೆಪಿಗೆ: ಸಾಮ್ನಾದಲ್ಲಿ ಉದ್ಧವ್‌ ಠಾಕ್ರೆ ಶಿವಸೇನೆ ಆರೋಪ

ಶಿಂಧೆ ಬಣದ 22 ಶಾಸಕರು ಬಿಜೆಪಿಗೆ: ಸಾಮ್ನಾದಲ್ಲಿ ಉದ್ಧವ್‌ ಠಾಕ್ರೆ ಶಿವಸೇನೆ ಆರೋಪ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನಾದ ಶಾಸಕರ ಮಧ್ಯೆ ಅಸಮಾಧಾನದ ಹೊಗೆಯಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ 40 ಶಾಸಕರಲ್ಲಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾದ ಮುಖವಾಣಿಯಾದ ಸಾಮ್ನಾ ಸೋಮವಾರ ಹೇಳಿದೆ.

ಸಾಮ್ನಾದ ವಾರದ ಅಂಕಣದಲ್ಲಿ ಶಿವಸೇನೆ ಈ ಆರೋಪ ಮಾಡಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಅವರ ಆಯ್ಕೆ ಬಿಜೆಪಿ ತನ್ನ ಅನುಕೂಲಕ್ಕಾಗಿ ಮಾಡಿಕೊಂಡ ತಾತ್ಕಾಲಿಕ ವ್ಯವಸ್ಥೆ ಎಂದು ಕರೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಎಲ್ಲ ನಿರ್ಧಾರಗಳನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ತೆಗೆದುಕೊಳ್ಳುತ್ತಾರೆ. ಆನಂತರ ಮುಖ್ಯಮಂತ್ರಿ ಶಿಂಧೆ ಆ ನಿರ್ಧಾರಗಳನ್ನು ಪ್ರಕಟಿಸುತ್ತಾರೆ” ಎಂದು ಸಾಮ್ನಾದಲ್ಲಿ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ವ್ಯಂಗ್ಯವಾಡಿದೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…’: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

“ಏಕನಾಥ್‌ ಶಿಂಧೆ ಅವರ ಮುಖ್ಯಮಂತ್ರಿ ಸ್ಥಾನವನ್ನು ಯಾವಾಗ ಬೇಕಾದರೂ ತೆರವುಗೊಳಿಸಲಾಗುವುದು ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಬಣದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ಬಿಜೆಪಿ ತಪ್ಪಿಸಿದೆ” ಎಂದು ಸಾಮ್ನಾದ ರೋಕ್‌ಥೋಕ್ ಅಂಕಣದಲ್ಲಿ ಶಿವಸೇನೆ ಆರೋಪಿಸಿದೆ.

“ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಮತ್ತು ಸರಪಂಚ್ ಚುನಾವಣೆಯಲ್ಲಿ ಶಿಂಧೆ ಬಣ ಯಶಸ್ಸು ಸಾಧಿಸಿರುವುದು ಸುಳ್ಳು. ಶಿಂಧೆ ಬಣದ ಕನಿಷ್ಠ 22 ಶಾಸಕರು ಅಸಮಾಧಾನಗೊಂಡಿದ್ದು, ಈ ಬಹುಪಾಲು ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ” ಎಂದು ಸಾಮ್ನಾ ಹೇಳಿದೆ.

ಶಿಂಧೆ ಅವರು ಶಿವಸೇನೆಗೆ ಮತ್ತು ಮಹಾರಾಷ್ಟ್ರಕ್ಕೆ ದೊಡ್ಡ ಅನ್ಯಾಯ ಮಾಡಿದ್ದು, ರಾಜ್ಯವು ಅವರನ್ನು ಕ್ಷಮಿಸುವುದಿಲ್ಲ. ಬಿಜೆಪಿ ತಮ್ಮ ಲಾಭಕ್ಕಾಗಿ ಶಿಂಧೆ ಅವರನ್ನು ಬಳಸಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಸಾಮ್ನಾ ಬರೆದಿದೆ.

ಇದನ್ನೂ ಓದಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

ಶಿಂಧೆ ಬಣದ 40 ಶಾಸಕರು ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರು ಬಿಜೆಪಿಯ ನಿಯಂತ್ರಣದಲ್ಲಿದ್ದಾರೆ ಎಂದು ಸಾಮ್ನಾದ ಅಂಕಣದಲ್ಲಿ ಬಿಜೆಪಿ ನಾಯಕರ ಜತೆಗೆ ಶಿಂಧೆ ಬಣದ ಶಾಸಕರು ನಡೆಸಿದ ಸಂಭಾಷಣೆಯನ್ನು ಉಲ್ಲೇಖಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...