Homeಮುಖಪುಟಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ...

ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

- Advertisement -
- Advertisement -

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಲಕ್ಷದ್ವೀಪಕ್ಕೆ  ಮಾಡಿದ ಪ್ರತಿ ಟ್ರಿಪ್‌ಗೆ ಲಕ್ಷದ್ವೀಪ ಆಡಳಿತವು ಲಕ್ಷಾಂತರ ರೂಪಾಯಿಗಳನ್ನು ವಿನಿಯೋಗಿಸುತ್ತಿದೆ.

ದ್ವೀಪವಾಸಿಗಳು ಪಟೇಲ್‍ ಹೊರಡಿಸಿದ ‘ಅತಿರೇಕದ ಆದೇಶಗಳನ್ನು’ ಮರುಪಡೆಯಬೇಕು ಮತ್ತು ಅವರನ್ನು ಆ ಸ್ಥಾನದಿಂದ ಕೈ ಬಿಡಬೇಕು ಎಂದು ಸೋಮವಾರ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ, ಪಟೇಲ್‍ ಅವರು ಕೋಸ್ಟ್‌ಗಾರ್ಡ್‍ ಡಾರ್ನಿಯರ್ ವಿಮಾನದಲ್ಲಿ ಲಕ್ಷದ್ವೀಪದ ಅಗತ್ತಿ ನಗರಕ್ಕೆ ತಲುಪಿದರು.

ಫೆಬ್ರವರಿ 21ರಂದು ಕೋಸ್ಟ್‌ಗಾರ್ಡ್‍ ಡಾರ್ನಿಯರ್ ವಿಮಾನದಲ್ಲಿ ಪಟೇಲ್ ಮತ್ತು ಮೂವರು ಅಧಿಕಾರಿಗಳು ದಮನ್‌ನಿಂದ ಕೈಗೊಂಡ ಒಂದು ರಿಟರ್ನ್ ಪ್ರಯಾಣಕ್ಕಾಗಿ ಲಕ್ಷದ್ವೀಪ ಆಡಳಿತವು 23,21,280 ರೂ ಬಾಡಿಗೆ ಪಾವತಿ ಮಾಡಿದೆ!

ಇದು ರಕ್ಷಣಾ ಸಚಿವಾಲಯ ಕೇಳಿದ ಪ್ರತಿಕ್ರಿಯೆಗೆ ದೊರೆತ ಉತ್ತರವಾಗಿದೆ.

ಇದು ಲಕ್ಷದ್ವೀಪದಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. ಏಕೆಂದರೆ ಪಟೇಲ್ ಅವರು ನೂರಾರು ತಾತ್ಕಾಲಿಕ ಕಾರ್ಮಿಕರು ಮತ್ತು ಗುತ್ತಿಗೆ ಕೆಲಸಗಾರರನ್ನು ವೆಚ್ಚ ಕಡಿಮೆ ಮಾಡುವ ಅಗತ್ಯವನ್ನು ಉಲ್ಲೇಖಿಸಿ ವಜಾಗೊಳಿಸಲು ಕ್ರಮಗಳನ್ನು ಕೈಗೊಂಡಿದ್ದಾರೆ. ಹೀಗಾಗಿ, ಅವರ ಬಗ್ಗೆ ವಿಪರೀತ ಅಸಮಾಧಾನವಿದೆ ಎಂದು  ಕವರಟ್ಟಿ ಗ್ರಾಮ ಪಂಚಾಯತ್ ಸದಸ್ಯ ಕೆ.ಐ. ನಿಜಾಮುದ್ದೀನ್ ಆರೋಪಿಸುತ್ತಾರೆ.

ಎಸ್‌ಎಲ್‌ಎಫ್‌ನಿಂದ ಬಿಜೆಪಿ ಹೊರಕ್ಕೆ

ಏತನ್ಮಧ್ಯೆ, ವಿವಾದಾತ್ಮಕ ಕರಡು ಅಧಿಸೂಚನೆಗಳು ಮತ್ತು ಆಡಳಿತ ಹೊರಡಿಸಿದ ಆದೇಶಗಳ ವಿರುದ್ಧ ಹೋರಾಡುತ್ತಿರುವ ಬಹುಪಕ್ಷಗಳ ಸೇವ್ ಲಕ್ಷದ್ವೀಪ ವೇದಿಕೆ (ಎಸ್‌ಎಲ್‌ಎಫ್) ಬಿಜೆಪಿಯನ್ನು ತನ್ನ ಸಮಿತಿಯಿಂದ ಉಚ್ಚಾಟಿಸಿದೆ.

ಲಕ್ಷದ್ವೀಪದ ಬಿಜೆಪಿ ಉಸ್ತುವಾರಿ ಅಬ್ದುಲ್ಲ ಕ್ಕುಟ್ಟಿ ‘ಎಸ್‌ಎಲ್‌ಎಫ್‌ನೊಂದಿಗೆ ಸಹಕರಿಸಬಾರದೆಂದು ಅವರ ಪಕ್ಷದವರನ್ನು ಕೇಳಿಕೊಳ್ಳುತ್ತಿರುವ ಆಡಿಯೋ ಕೂಡ ಈಗ ಬಹಿರಂಗವಾಗಿದೆ.. ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ದೇಶದ್ರೋಹ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಸಮರ್ಥ ನಿಲುವು ತಳೆಯಲಿಲ್ಲ. ಹೀಗಾಗಿ ಹೋರಾಟದ ವೇದಿಕೆಯಿಂದ ಬಿಜೆಪಿಯನ್ನು ಉಚ್ಛಾಟಿಸಿದ್ದೇವೆ ಎಂದು ಸೇವ್ ಲಕ್ಷದ್ವೀಪ ವೇದಿಕೆಯ ಸದಸ್ಯರೊಬ್ಬರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...