HomeಅಂಕಣಗಳುSIRSIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಒಟ್ಟು 23 ವಿರೋಧ ಪಕ್ಷಗಳು ಮತ್ತು ಒಬ್ಬರು ಪಕ್ಷೇತರ ಸಂಸದರು ಮಂಗಳವಾರ (ಜೂನ್ 30) ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ಜಂಟಿ ಪತ್ರವೊಂದನ್ನು ಬರೆದಿದ್ದಾರೆ.

ಜೂನ್ 8ರಂದು 25 ವಿರೋಧ ಪಕ್ಷಗಳು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಿ, ಒಗ್ಗಟ್ಟನ್ನು ಮೂಡಿಸಲು ನಿರ್ಣಯಿಸಿತ್ತು, ಜೊತೆಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಚುನಾವಣೆಗಳ ನಿಷ್ಪಕ್ಷಪಾತತೆಯ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಕಳುಹಿಸಿತ್ತು. ಜೂನ್‌ 8ರ ಸಭೆಗೆ ಡಿಎಂಕೆ ಮತ್ತು ಎಎಪಿ ಹಾಜರಾಗದಿದ್ದರೂ, ಎರಡೂ ಪಕ್ಷಗಳು ಜಂಟಿ ಪತ್ರಕ್ಕೆ ಸಹಿ ಹಾಕಿವೆ.

ಇಂಡಿಯಾ ಮೈತ್ರಿಕೂಟದ ಪ್ರಮುಖ ಅಂಗವಾಗಿದ್ದ ಡಿಎಂಕೆ, ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವು ತನ್ನ ಕೈಬಿಟ್ಟು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ ಕಾರಣ ಈ ತಿಂಗಳ ಆರಂಭದಲ್ಲಿ ನಡೆದ ಸಭೆಗೆ ಹಾಜರಾಗಿರಲಿಲ್ಲ. 

ಆ ಸಭೆಯಲ್ಲಿ ಡಿಎಂಕೆ ಪಕ್ಷವನ್ನು ನಡೆಸಿಕೊಂಡ ರೀತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ಟೀಕೆಯನ್ನು ಎದುರಿಸಿತ್ತು ಮತ್ತು ಡಿಎಂಕೆ ಹಾಗೂ ಎಎಪಿ ಎರಡೂ ಪಕ್ಷಗಳನ್ನು ಮೈತ್ರಿಕೂಟಕ್ಕೆ ಮರಳಿ ಕರೆತರಲು ಎಲ್ಲಾ ಪಕ್ಷಗಳು ಶ್ರಮಿಸಬೇಕು ಎಂಬ ಒಮ್ಮತಕ್ಕೆ ನಾಯಕರು ಬಂದಿದ್ದರು ಎಂದು ವರದಿಯಾಗಿದೆ.

ಜೂನ್ 8 ರಂದು ನಡೆದ ಸಭೆಯ ತೀರ್ಮಾನದಂತೆ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರವನ್ನು ಕಳುಹಿಸಲಾಗಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ಮಾಧ್ಯಮ ವಿಭಾಗದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

“ಜೂನ್ 8, 2026 ರಂದು ನಡೆದ ಇಂಡಿಯಾ ಜನ್‌ಬಂಧನ್ ಸಭೆಯಲ್ಲಿ 21 ರಾಜಕೀಯ ಪಕ್ಷಗಳು ಮತ್ತು ಒಬ್ಬರು ಪಕ್ಷೇತರ ಸಂಸದರು ಭಾಗವಹಿಸಿದ್ದರು. ಈ ಸಭೆಯಲ್ಲಿ, ಭಾರತೀಯ ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಮತ್ತು ಇತರ ಚುನಾವಣೆ ಸಂಬಂಧಿತ ವಿಷಯಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರ ಬರೆಯಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು” ಎಂದು ಹೇಳಿದ್ದಾರೆ.

ಮುಂದುವರಿದು, “ಅದರಂತೆ, ಈಗ 23 ರಾಜಕೀಯ ಪಕ್ಷಗಳು ಹಾಗೂ ಒಬ್ಬರು ಪಕ್ಷೇತರ ಸಂಸದರು ಸಹಿ ಮಾಡಿರುವ ಜಂಟಿ ಪತ್ರವನ್ನು ಇಂದು ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲಾಗಿದೆ. ವಿರೋಧ ಪಕ್ಷಗಳು ‘ಶ್ಯೂರ್’ (SURE—Solidarity, Unity and REsistance) ತತ್ವಕ್ಕೆ ದೃಢವಾಗಿ ಬದ್ಧವಾಗಿವೆ” ಎಂದು ತಿಳಿಸಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜೈರಾಮ್ ರಮೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಇಂಡಿಯಾ ಮೈತ್ರಿಕೂಟದ ಹೊರಗಿರುವ ಎಎಪಿ ಮತ್ತು ಡಿಎಂಕೆ ಪಕ್ಷಗಳು ಈ ಪತ್ರಕ್ಕೆ ಸಹಿ ಹಾಕಿರುವುದನ್ನು ಖಚಿತಪಡಿಸಿದ್ದಾರೆ.

ಕಳೆದ ವರ್ಷ ಬಿಹಾದಲ್ಲಿ ಮೊದಲ ಬಾರಿಗೆ ಆರಂಭಿಸಲಾದ ಎಸ್‌ಐಆರ್ ಪ್ರಕ್ರಿಯೆಯು ಒಂದು ವರ್ಷವನ್ನು ಪೂರೈಸಿದ ಸಂದರ್ಭದಲ್ಲೇ ಈ ಜಂಟಿ ಪತ್ರವನ್ನು ಕಳುಹಿಸುವ ನಿರ್ಧಾರಕ್ಕೆ ಬರಲಾಗಿದೆ. ಅಂದಿನಿಂದ ಈವರೆಗೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಇದರ ಪರಿಣಾಮವಾಗಿ ಐದು ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಪಶ್ಚಿಮ ಬಂಗಾಳವೊಂದರಲ್ಲೇ ಸುಮಾರು 27 ಲಕ್ಷ ಮತದಾರರು ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗಿಲ್ಲ ಮತ್ತು ಈ ಕುರಿತಾದ ಮೇಲ್ಮನವಿಗಳು ಇಂದಿಗೂ ನ್ಯಾಯಾಂಗ ನ್ಯಾಯಮಂಡಳಿಗಳ ಮುಂದೆ ಬಾಕಿ ಇವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...