Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...