Homeಕರ್ನಾಟಕನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

ನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

- Advertisement -
- Advertisement -

ಕರ್ನಾಟಕದಲ್ಲಿ ಹೊಸದಾಗಿ ನೇಮಕಗೊಂಡ 32 ಸಚಿವರಲ್ಲಿ 31 ಮಂದಿ ಒಂದು ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಚುನಾವಣಾ ಕಾವಲು ಸಮಿತಿಯ ವಿಶ್ಲೇಷಣೆಯು 24 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇರುವುದನ್ನು ಬಹಿರಂಗಪಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು, ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾರೆ. ಮೇ 20 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಂಬತ್ತು ಇತರ ಸಚಿವರು ಸಂಪುಟಕ್ಕೆ ಸೇರ್ಪಡೆಗೊಂಡರು. ಮೇ 27 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 24 ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. 34 ಸಂಖ್ಯಾಬಲದ ರಾಜ್ಯ ಸಚಿವ ಸಂಪುಟವು ಸಂಪೂರ್ಣ ವಿಸ್ತರಣೆಯಾಗಿದೆ.

ತನ್ನ ವರದಿಯಲ್ಲಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, “34 ಮಂತ್ರಿಗಳಲ್ಲಿ 32 ಮಂದಿಯ ಚುನಾವಣಾ ಪ್ರಮಾಣ ಪತ್ರಗಳನ್ನು ವಿಶ್ಲೇಷಿಸಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಸ್ಪಷ್ಟ ಮತ್ತು ಸಂಪೂರ್ಣ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ಸಚಿವ ಕೆ.ಜೆ.ಜಾರ್ಜ್ ಅವರ ಪ್ರಮಾಣಪತ್ರವನ್ನು ಸರಿಯಾಗಿ ವಿಶ್ಲೇಷಲು ಸಾಧ್ಯವಾಗಿಲ್ಲ” ಎಂದಿದೆ. ಮತ್ತೊಬ್ಬ ಸಚಿವ ಎನ್.ಎಸ್.ಬೋಸರಾಜು ಅವರು ರಾಜ್ಯ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಲ್ಲದ ಕಾರಣ ಅವರ ವಿವರಗಳನ್ನು ವಿಶ್ಲೇಷಿಸಲು ಸಾಧ್ಯವಾಗಿಲ್ಲ.

32 ಸಚಿವರ ಸರಾಸರಿ ಆಸ್ತಿ 119.06 ಕೋಟಿ ರೂಪಾಯಿ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಡಿ.ಕೆ.ಶಿವಕುಮಾರ್ ಅವರು 1,413.80 ಕೋಟಿ ರೂಪಾಯಿ ಮೌಲ್ಯದ ಘೋಷಿತ ಆಸ್ತಿ ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 51.93 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

58.56 ಲಕ್ಷ ಆಸ್ತಿ ಹೊಂದಿರುವ, ಕೋಟ್ಯಾಧಿಪತಿಯಲ್ಲದ ಏಕೈಕ ಸಚಿವ ತಿಮ್ಮಾಪುರ್‌ ಆರ್‌.ಬಾಳಪ್ಪ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಏಳು ಸಚಿವರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ತೋರಿಸಿದೆ. ಡಿ.ಕೆ.ಶಿವಕುಮಾರ್, ಡಿ ಸುಧಾಕರ್, ಜಮೀರ್ ಅಹಮದ್ ಖಾನ್, ಕೆಎಚ್ ಮುನಿಯಪ್ಪ, ಸಿದ್ದರಾಮಯ್ಯ, ಬಿ ನಾಗೇಂದ್ರ ಮತ್ತು ಈಶ್ವರ್ ಖಂಡ್ರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳಿವೆ.

ಸಚಿವ ನಾಗೇಂದ್ರ ವಿರುದ್ಧ 105 ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ. ಹೋರಾಟದ ಸಂದರ್ಭದಲ್ಲಿಯೂ ಅನೇಕ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಸಾಧ್ಯತೆಗಳು ಇರುತ್ತವೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಗಂಭೀರ ಅಪರಾಧಗಳನ್ನು ಜಾಮೀನು ರಹಿತ ಅಪರಾಧಗಳೆಂದು ವ್ಯಾಖ್ಯಾನಿಸಿದೆ. ಇಂತಹ ಅಪರಾಧಗಳಲ್ಲಿ ಗರಿಷ್ಠ ಐದು ವರ್ಷಗಳು ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷೆಯನ್ನು ನೀಡಲಾಗುತ್ತದೆ. ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಇವುಗಳು ಸಂಬಂಧಿಸಿರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...