Homeಮುಖಪುಟನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ 25 ಪಕ್ಷಗಳು ಭಾಗಿ: 21 ಪಕ್ಷಗಳಿಂದ ಕಾರ್ಯಕ್ರಮ ಬಹಿಷ್ಕಾರ

ನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ 25 ಪಕ್ಷಗಳು ಭಾಗಿ: 21 ಪಕ್ಷಗಳಿಂದ ಕಾರ್ಯಕ್ರಮ ಬಹಿಷ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಜೊತೆಗಿದ್ದರು. ಒಂದು ಗಂಟೆಗಳ ಪೂಜೆ ನಡೆಯಿತು. ಇದೇ ಸಂದರ್ಭದಲ್ಲಿ ಸರ್ವಧರ್ಮಗಳ ಪ್ರಾರ್ಥನೆ ಮತ್ತು ಪ್ರಧಾನಿ ಮೋದಿಗೆ ಸೆಂಗೋಲ್ ನೀಡಲಾಯಿತು.

ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪ ಸೇರಿ ದೇಶದ 25 ಪಕ್ಷಗಳ ಪ್ರತಿನಿಧಿಗಳು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಎನ್‌ಡಿಎ ಮೈತ್ರಿಕೂಟದಲ್ಲಿಲ್ಲದ ಹಲವು ಪಕ್ಷಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಅವುಗಳೆಂದರೆ ಬಿಜು ಜನತಾ ದಳ (ಬಿಜೆಡಿ), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ), ಜನತಾ ದಳ (ಜಾತ್ಯತೀತ), ತೆಲುಗು ದೇಶಂ ಪಕ್ಷ (ಟಿಡಿಪಿ), ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ( YSRCP).

ಕಾರ್ಯಕ್ರಮ ಬಹಿಷ್ಕರಿಸಿದವರು

ಇಂದಿನ ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಉದ್ಘಾಟಿಸಬೇಕೆ ಹೊರತು ಪ್ರಧಾನಿ ಮೋದಿಯಲ್ಲ ಎಂದು ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸಿವೆ. ರಾಷ್ಟ್ರಾಧ್ಯಕ್ಷರು ದೇಶದ ಮುಖ್ಯಸ್ಥರಾಗಿ ಉದ್ಘಾಟಿಸುವ ಗೌರವ ಪಡೆಯಬೇಕಿತ್ತು. ಆದರೆ ಅವರನ್ನು ಆಹ್ವಾನಿಸದ ಕಾರಣ, ನರೇಂದ್ರ ಮೋದಿ ಸರ್ಕಾರವು ಅಧ್ಯಕ್ಷರ ಕುರ್ಚಿಗೆ ಅಗೌರವ ತೋರುತ್ತಿದೆ ಎಂದು ಈ ಪಕ್ಷಗಳು ಆರೋಪಿಸಿವೆ.

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಆಮ್ ಆದ್ಮಿ ಪಕ್ಷ (ಎಎಪಿ), ಶಿವಸೇನೆ (ಯುಬಿಟಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಸಿಪಿಐ(ಎಂ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಜನತಾ ದಳ (ಯುನೈಟೆಡ್), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ನ್ಯಾಷನಲ್ ಕಾನ್ಫರೆನ್ಸ್ (NC), ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP), ಭಾರತ ರಾಷ್ಟ್ರ ಸಮಿತಿ (BRS), ಮತ್ತು ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷಗಳು ಕಾರ್ಯಕ್ರಮದಿಂದ ದೂರ ಉಳಿದಿವೆ.

ಇಂದಿನ ಕಾರ್ಯಕ್ರಮದಲ್ಲಿ 382 ಲೋಕಸಭಾ ಸದಸ್ಯರು, 131 ರಾಜ್ಯಸಭಾ ಸದಸ್ಯರು ಭಾಗಿಯಾದರೆ, ವಿರೋಧ ಪಕ್ಷಗಳ 156 ಲೋಕಸಭಾ ಸದಸ್ಯರು ಮತ್ತು 104 ರಾಜ್ಯಸಭಾ ಸದಸ್ಯರು ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.

ಇದನ್ನೂ ಓದಿ; ಇಂದು ನೂತನ ಸಂಸತ್ ಕಟ್ಟಡದ ಎದುರು ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...